ಸಿದ್ದರಾಮಯ್ಯಗೆ ಶಸ್ತ್ರಚಿಕಿತ್ಸೆ: 4 ದಿನ ಸಾರ್ವಜನಿಕರ ಭೇಟಿಗೆ ಇಲ್ಲ ಅವಕಾಶ

Siddaramaiah
Published on

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು(ಶುಕ್ರವಾರ) ಬೆಳಗ್ಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಮೂಲವ್ಯಾಧಿಗೆ ಚಿಕಿತ್ಸೆ ಪಡೆದಿದ್ದ ಜಾಗದಲ್ಲಿ ಸಣ್ಣ ಗುಳ್ಳೆ ಕಾಣಿಸಿಕೊಂಡಿದ್ದು, ಸಣ್ಣ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಎಚ್ಎಎಲ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆ ಬಳಿಕ ಸಂಜೆ ಡಿಸ್ಚಾರ್ಜ್​ ಆಗಲಿದ್ದಾರೆ. ನಾಲ್ಕು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದು, ಈ ವೇಳೆ ಸಾರ್ವಜನಿಕರ ಭೇಟಿಗೆ ಅವಕಾಶವಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net