ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ ಅನುಮತಿ ಖಂಡನೆ

19-RNR-06
Published on

ರಾಣೆಬೆನ್ನೂರ: ರಾಜ್ಯಪಾಲರು ಮುಡಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವತಿರ್ಸುತ್ತಿರುವುದು ಸರಿಯಲ್ಲ. ರಾಜ್ಯಪಾಲರು ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಕರ್ನಾಟಕ ಪ್ರಾದೇಶಿಕ ಕುರುಬ ಸಂದ ಯುವ ಟಕದ ನಿರ್ದೇಶಕ ಆನಂದ ಹುಲಬನ್ನಿ ಒತ್ತಾಯಿಸಿದರು.
ರಾಜ್ಯದಲ್ಲಿ ಕುರುಬ ಸಮಾಜದ ಜನಪ್ರಿಯ ನಾಯಕ ಹಾಗೂ ಅಹಿಂದ ವರ್ಗಕ್ಕೆ ಸಹಕಾರ ನೀಡಿದ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ ಕುತಂತ್ರ ಇದಾಗಿದೆ. ನಿವೇಶನಗಳ ಹಂಚಿಕೆಯನ್ನು ರೂಪಿಸಿದ್ದು ಹಿಂದಿನ ಬಿಜೆಪಿ ಸರ್ಕಾರವೇ ಆಗಿದೆ. ಸಿದ್ದರಾಮಯ್ಯ ಪತ್ನಿಯ, ಸಹೋದರ ತಮ್ಮ ಸಹೋದರಿಗೆ ಅರಿಷಿಣ ಕುಂಕುಮ ರೂಪದಲ್ಲಿ ಆಸ್ತಿ ಕೊಟ್ಟಿದ್ದಾರೆ. ಅದನ್ನು ಸರಿಯಾಗಿ ಅರ್ಥೆಸಿಕೊಳ್ಳದ ರಾಜ್ಯಪಾಲರು ಇದೀಗ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಸಮಂಜಸವಲ್ಲ ಇದು ಅತ್ಯಂತ ಖಂಡನೀಯವಾಗಿದೆ. ಮುಡಾ ವಿಷಯದಲ್ಲಿ ಅನಗತ್ಯವಾಗಿ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಹಾಗೇ ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಕಷ್ಟು ಹಗರಣಗಳಾಗಿವೆ. ಅದನ್ನು ಕೈಬಿಟ್ಟು ಸಿಎಂ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದ್ದರಿಂದ ರಾಜ್ಯಪಾಲರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net