ರಾಜ್ಯ ಬಜೆಟ್; ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು

siddaramaiah
Published on

ಬೆಂಗಳೂರು: ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್​ ಭಾಷಣದಲ್ಲಿ ಘೋಷಿಸಿದ್ದಾರೆ.

ಇಂದು ದಾಖಲೆಯ 15ನೇ ಬಜೆಟ್​ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಜೈನ್​ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ., ಜೈನ್​ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,600 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್​ ಭಾಷಣದ ವೇಳೆ ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net