ಸಿದ್ದರಾಮಯ್ಯರನ್ನು ಕಟ್ಟಿಹಾಕಲು ಸಾಧ್ಯವೇ ಇಲ್ಲ; ಜಾರಕಿಹೊಳಿ

CM siddaramaiah
Published on

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಯಾರಿಂದಲೂ ಸಾಧ್ಯವೇ ಇಲ್ಲ ಎಂದು ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ನಮ್ಮ ಸಿಎಂ, ಅವರನ್ನು ಕಟ್ಟಿ ಹಾಕುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲೇ ಎಲ್ಲ ಕೆಲಸ ನಡೆಯುತ್ತಿದೆ. ಅವರನ್ನು ಕಟ್ಟಿ ಹಾಕಲು ಸಾಧ್ಯವೇ ಇಲ್ಲ. ಅಂತಹ ಅನಿವಾರ್ಯತೆ ಪಕ್ಷದಲ್ಲೂ ಇಲ್ಲ. ನಮ್ಮ ಸರ್ಕಾರ ಚೆನ್ನಾಗಿ ನಡೆಯುತ್ತಿದೆ ಎಂದರು.

ಬಿ.ಕೆ.ಹರಿಪ್ರಸಾದ್ ಸಿದ್ದರಾಮಯ್ಯರನ್ನು ಟೀಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಕೊಟ್ಟಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ನೋಟಿಸ್ ಹೊಸದೇನಲ್ಲ. ಜಮೀರ್ ಅಹ್ಮದ್‌ಗೂ ಕೊಟ್ಟಿದ್ದರು. ನಾಲ್ಕಾರು ಹಿರಿಯರಿಗೂ ಕೊಟ್ಟಿದ್ದರು. ನೋಟಿಸ್ ಕೊಟ್ಟು ಉತ್ತರ ಪಡೆಯುವುದು ಸ್ವಾಭಾವಿಕ. ಅವರ ಡ್ಯೂಟಿ ಅವರು ಮಾಡಿದ್ದಾರೆ ಎಂದು ಹೇಳಿದರು.

ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರ ನೀಡಿ, ಅಂತಹ ಯಾವುದೇ ಪ್ರಸ್ತಾವನೆ ಇಲ್ಲ. ನಮ್ಮ ಜಿಲ್ಲೆಯಲ್ಲೇ ಸಾಕಷ್ಟು ಜನ ಸ್ಪರ್ಧಿಸಲು ಆಕಾಂಕ್ಷಿ ಇದ್ದಾರೆ. ಅವರಿಗೆ ಅವಕಾಶ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net