ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನ್ನನ್ನು ಆಮಂತ್ರಿಸಿಲ್ಲ; ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ

siddaramaiah
Published on

ಬೆಂಗಳೂರು: ರಾಜ್ಯೋತ್ಸವದಂದು ಪುನೀತ್ ರಾಜ್​ಕುಮಾರ್ ಅವರಿಗೆ ನೀಡಲಾಗುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನಾನು ಹೋಗುತ್ತಿಲ್ಲ. ನನ್ನನ್ನು ಸರ್ಕಾರ ಆಮಂತ್ರಿಸಿಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ವಿಧಾನ ಸೌಧದ ಮುಂಭಾದಲ್ಲಿ ಇಂದು (ನ.1) ಸಂಜೆ ನಡೆಯುತ್ತಿರುವ ಕಾರ್ಯಕ್ರಮಕ್ಕೆ ನನ್ನನ್ನು ಯಾರೂ ಆಹ್ವಾನಿಸಿಲ್ಲ. ಆದರೆ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ನನ್ನ ಹೆಸರು ಪ್ರಕಟಿಸಿದ್ದಾರೆ ಎಂದು ಹೇಳಿದರು.

ನಾನು ವಿರೋಧ ಪಕ್ಷದ ನಾಯಕ. ನನ್ನದೇ ಆದಂತಹ ಪ್ರೊಟೋಕಾಲ್ ಇರುತ್ತದೆ. ಸರ್ಕಾರದ ವತಿಯಿಂದ ಬಂದು ಕರೆದಿದ್ದರೆ ನಾನು ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹೋಗುವುದೆಂದು ನಿರ್ಧರಿಸಿದ್ದೆ. ಆದರೆ ನನ್ನನ್ನು ಕರೆದಿಲ್ಲ ಎಂದು ಹೇಳಿದ್ದಾರೆ.

ಪುನೀತ್ ರಾಜ್​ಕುಮಾರ್ ತೆರೆಯ ಹಿಂದೆ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಹಲವರ ಬದುಕಿಗೆ ದಾರಿದೀಪವಾಗಿದ್ದಾರೆ. ಇವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net