ಕೂಡ್ಲಿಗಿಯಲ್ಲಿ ಬಿಸಿಲಿನ ಝಳಕ್ಕೆ ಕುಸಿದು ಬಿದ್ದ ಸಿದ್ದರಾಮಯ್ಯ!

siddaramaiah lokayukta
Published on

ವಿಜಯನಗರ: ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದಾರೆ.

ಬೆಳಗ್ಗೆ ಕೂಡ್ಲಿಗಿ, ಮಧ್ಯಾನ್ಹ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್​ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು.

ಕೂಡ್ಲಿಗಿಯಲ್ಲಿ ಬಿಸಿಲಿನ ತಾಪಕ್ಕೆ ಕ್ಷಣಮಾತ್ರದಲ್ಲಿ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಕಾರಿನ ಬಾಗಿಲಿನ ಬಳಿ ಏಕಾಏಕಿ ಸಿದ್ದರಾಮಯ್ಯ ಕುಸಿದು ಬೀಳುತ್ತಿದ್ದಂತೆಯೇ ಕೈ ಹಿಡಿದ ವೈದ್ಯ ಗ್ಲೂಕೋಸ್ , ನೀರು ಕುಡಿಸಿದ್ದಾರೆ. ಅಭ್ಯರ್ಥಿ ಡಾ.ಶ್ರೀನಿವಾಸ್ ಈಗ ಸಿದ್ದರಾಮಯ್ಯರ ಆರೈಕೆ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net