

ಕಲಬುರಗಿ: ಗೃಹ ಜ್ಯೋತಿ ಯೋಜನೆಗೆ ಇಂದು ಕಲಬುರಗಿಯ ಎನ್ವಿ ಮೈದಾನದಲ್ಲಿ ಚಾಲನೆ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ , AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ , ಉಪಮುಖ್ಯಮಂತ್ರಿ ಡಿಕೆಶಿ, ಕೆಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ರಹೀಮ್ ಖಾನ್, ಶರಣಪ್ಪ ದರ್ಶನಾಪೂರ್ ಸೇರಿದಂತೆ ಹಲವು ಸಚಿವರ ಆ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದಾರೆ.
ಬೆಳಗ್ಗೆ 10 ಗಂಟೆಗೆ ಬೆಂಗಳೂರನಿಂದ ಹೊರಟ ಸಿಎಂ ಸಿದ್ದರಾಮಯ್ಯ, ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸುಮಾರು 11 ಗಂಟೆಗೆ ಕಲಬುರಗಿಗೆ ಆಗಮಿಸಿದ್ದಾರೆ. ನಂತರ ಕಲಬುರಗಿ ವಿಮಾನ ನಿಲ್ದಾಣದಿಂದ ಎನ್ವಿ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದರು.
ಇದನ್ನೂ ಓದಿ: ಗೃಹಜ್ಯೋತಿ ಚಾಲನೆ ಕಾರ್ಯಕ್ರಮದಲ್ಲಿ ಭರ್ಜರಿ ಊಟ
ಮುಖ್ಯಮಂತ್ರಿ ಸಿದ್ದರಾಮಯ್ಯ, ಪುಟ್ಟ ಗುಡಿಸಿಲಿನ ಪ್ರತಿಕೃತಿಯ ಲೈಟ್ ಸ್ವಿಚ್ ಆನ್ ಮಾಡುವ ಮೂಲಕ ಸಾಂಕೇತಿಕವಾಗಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಾದ ಹತ್ತು ಜನರಿಗೆ ಸಾಂಕೇತಿಕವಾಗಿ ಮುಖ್ಯಮಂತ್ರಿ, ಜಿರೋ ಬಿಲ್ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನೆರೆದಿದ್ದವರನ್ನು ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ ಸ್ವಾಗತಿಸಿ, ಸಚಿವರಾದ ಡಾ| ಶರಣ ಪ್ರಕಾಶ ಪಾಟೀಲ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಗೃಹಜ್ಯೋತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಿಎಂ, ಮಧ್ಯಾಹ್ನ ಸುಮಾರು 3:30ರವರೆಗೆ ಭಾಗವಹಿಸಲಿದ್ದಾರೆ ಎನ್ನಲಾಗಿದ್ದು, ಬಳಿಕ ಸಂಜೆ ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿಲಿದ್ದಾರೆ ಎಂದು ಹೇಳಲಾಗಿದೆ.