ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿದ್ದಾರೆ

hdk
Published on

ಮೈಸೂರು: ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿ ನೀವು ಯಾರು? ಕಾಂಗ್ರೆಸ್‌ಗೆ ನೀವು ವಲಸಿಗರಲ್ಲವಾ ? ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.

‘ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಎಚ್‌ಡಿಕೆ ಮಂಡ್ಯದಲ್ಲಿ ಸೋಲುತ್ತಾರೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ಅಧಿಕಾರ ಮಾಡುವುದು ಬಿಟ್ಟು ನನ್ನ ಗೆಲುವು-ಸೋಲಿನ ಬಗ್ಗೆ ಹೇಳುತ್ತಿರುವ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ಟೀಕಿಸಿದ ಅವರು, ನಿಖಿಲ್ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಎಲ್ಲರಿಗೂ ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ ಎಂದರು.

ನಾನು ಕನ್ನಡಿಗ. ಎಲ್ಲಿ ಬೇಕಾದರೂ ನಾನು ಸ್ಪರ್ಧೆ ಮಾಡಬಹುದು. ಈ ಬಾರಿ ಮಂಡ್ಯದಲ್ಲಿ ಹಳೆಯ ಸ್ನೇಹಿತರ ಜೊತೆ ಸ್ಪರ್ಧೆ ಎದುರಿಸಬೇಕು. ಸ್ನೇಹಿತರ ಎದುರು ಸ್ಪರ್ಧೆಗಿಳಿಯುತ್ತಿರುವುದು ನನ್ನ ಹಣೆಬರಹ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net