

ಮೈಸೂರು: ‘ಹಿಂದುಳಿದ ವರ್ಗಗಳ ನಾಯಕ ಎಂಬ ಕಾರಣಕ್ಕೆ ನನ್ನನ್ನು ಮುಗಿಸಲು ಹೊರಟ್ಟಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಹಿಂದುಳಿದ ವರ್ಗದ ಸಿಎಂ ಅಲ್ಲ, ಅವರು ರಾಜ್ಯದ ಮುಖ್ಯಮಂತ್ರಿ ಎಂಬುದು ನೆನಪಿರಲಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು.
ಸಿದ್ದರಾಮಯ್ಯ ಸಿಎಂ ಆಗಿರುವುದಕ್ಕೆ ನಾನೇಕೆ ಅಸೂಯೆ ಪಡಲಿ. ಅವರ ಮೇಲಿರುವ ಆರೋಪಗಳಿಗೆ ಮೊದಲು ಉತ್ತರ ನೀಡಲಿ ಎಂಬುದಷ್ಟೇ ನಮ್ಮ ಬೇಡಿಕೆ. ಸಿದ್ದರಾಮಯ್ಯ ಕುಟುಂಬದವರು ಮುಡಾದಿಂದ 40 ನಿವೇಶನಗಳನ್ನಾದರೂ ಪಡೆದುಕೊಳ್ಳಲಿ. ಆದರೆ, ಆ ನಿವೇಶನಗಳು ಕಾನೂನುಬದ್ಧವಾಗಿ ಪಡೆದುಕೊಳ್ಳಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.