

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಡಗೈ ನೋವಿನಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಮನೆಗೆ ಆಗಮಿಸಿ ಪರೀಕ್ಷೆ ನಡೆಸಿದ್ದಾರೆ.
ನಿರಂತರ ಪ್ರಚಾರದ ಹಿನ್ನೆಲೆ ಸಿದ್ದರಾಮಯ್ಯ ಅವರ ಎಡಗೈಯಲ್ಲಿ ಊತ ಕಾಣಿಸಿಕೊಂಡಿದ್ದು ನೋವು ಪ್ರಾರಂಭವಾಗಿದೆ. ಅಷ್ಟೇ ಅಲ್ಲದೇ ವಿಶ್ರಾಂತಿ ಸಿಗದ ಹಿನ್ನೆಲೆ ಬಳಲಿದ್ದಾರೆ. ಸಿದ್ದರಾಮಯ್ಯ ಅವರ ಎಡಗೈ ಊದಿಕೊಂಡಿದ್ದು, ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ವೈದ್ಯರು ಪರೀಕ್ಷೆ ಮಾಡಿ ಚಿಕಿತ್ಸೆ ನೀಡಿದ್ದಾರೆ.
ರಾಜ್ಯ ವಿಧಾನ ಸಭಾ ಚುನಾವಣೆಗೆ ತೆರೆ ಬಿದ್ದಿದೆ. ನಿರಂತರ ಪ್ರಚಾರ, ಜನರ ನಡುವೆ ಓಡಾಟ ನಡೆಸಿದ್ದರು ಸಿದ್ದರಾಮಯ್ಯ. ಈಗಾಗಲೇ ಎಲ್ಲಾ ಪಕ್ಷದ ಅಭ್ಯರ್ಥಿಗಳು, ಕಾರ್ಯಕರ್ತರಲ್ಲಿ ಸೋಲು- ಗೆಲುವಿನ ಲೆಕ್ಕಾಚಾರದ ಅಂಶಗಳೇ ಓಡುತ್ತಿವೆ.