ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ!

Siddaramaiah (1)
Published on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಂಥಾಹ್ವಾನ ನೀಡಿದ್ದಾರೆ.

ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಗ್ಗೆ ಕುಹಕವಾಡುವ ಬಿಜೆಪಿ ನಾಯಕರಿಗೆ ನನ್ನದೊಂದು ನೇರ ಸವಾಲು. 2013ರ ಕಾಂಗ್ರೆಸ್ ಪ್ರಣಾಳಿಕೆ ಮತ್ತು 2018ರ ಬಿಜೆಪಿ ಪ್ರಣಾಳಿಕೆಗಳಲ್ಲಿ ನೀಡಲಾದ ಭರವಸೆಗಳು ಹಾಗೂ ಈಡೇರಿಸಲಾಗಿರುವ ಭರವಸೆಗಳ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಸೋಣ. ಧಮ್–ತಾಕತ್ ಇದ್ದ ಮುಖ್ಯಮಂತ್ರಿಗಳು, ಇಲ್ಲವೇ ಐವತ್ತಾರು ಇಂಚಿನ ಎದೆಯ ಪ್ರಧಾನಿಗಳು ಯಾರಾದರೂ ಬರಲಿ, ನಾನು ಚರ್ಚೆಗೆ ಸಿದ್ಧನಿದ್ದೇನೆ ಎಂದಿದ್ದಾರೆ.

ನುಡಿದಂತೆ ನಡೆದಿರುವ ವಿಶ್ವಾಸ ನನ್ನದು, ಜನತಾ ಜನಾರ್ಧನರೇ ಇದಕ್ಕೆ ಸಾಕ್ಷಿ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಅವರು ಪಂಥಹ್ವಾನ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net