ಭಾರತ ಎಂದು ಮರುನಾಮಕರಣ; ಚುನಾವಣೆ ಸಮೀಪಿಸುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Untitled design - 2023-09-06T172523.740
Published on

ಮಧುಗಿರಿ: ಇಂಡಿಯಾ ಎಂಬುದನ್ನು ಭಾರತ ಎಂದು ಮರುನಾಮಕರಣ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರ ಮುನ್ನೆಲೆಗೆ ಬಂದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಹೇಳಿದರು.

ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ದೇಶದ ಸಂವಿಧಾನವನ್ನು 26ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಹೇಳಿದರು.

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ. ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಿಸಿದರು.

ಸದ್ಯ ಭಾರತ ಎಂದು ಮರನಾಮಕರಣ ಮಾಡುವ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸೇರಿದಂತೆ ದೇಶದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಪರ-ವಿರೋಧ ಹೇಳಿಕೆಗಳು ವ್ಯಾಪಕವಾಗಿ ವ್ಯಕ್ತವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net