ಕೋಲಾರದಿಂದ ಸಿದ್ದು ಸ್ಪರ್ಧೆ ಹಿನ್ನೆಲೆ; ಜಿಲ್ಲಾ ಉಸ್ತುವಾರಿ ಉಪಾಧ್ಯಕ್ಷರಾಗಿ ಸೀತಾರಾಮ್ ನೇಮಕ

siddaramaiah
Published on

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸುತ್ತಿದ್ದಂತೆ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಎಂ.ಆರ್. ಸೀತಾರಾಮ್ ಅವರನ್ನು ಈ ಮೊದಲು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೆ.ಪಿ.ಸಿ.ಸಿ. ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಕೋಲಾರ ಡಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇದ್ದ ಕಾರಣದಿಂದ ಕೆಪಿಸಿಸಿ ಉಪಾಧ್ಯಕ್ಷರಾದ ಎಂ. ನಾರಾಯಣ ಸ್ವಾಮಿಯವರನ್ನು ಹೆಚ್ಚುವರಿಯಾಗಿ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು.

ಆದರೆ ಇದೀಗ ಈ ಹಿಂದೆ ನೇಮಿಸಿದಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರಾಗಿ ಮುಂದುವರೆದು, ಕಾರ್ಯನಿರ್ವಹಿಸಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಎಂ. ನಾರಾಯಣ ಸ್ವಾಮಿ ಅವರು ಎಂದಿನಂತೆ ಕೆಪಿಸಿಸಿ ಕಾರ್ಯಕ್ರಮ, ಸಭೆಗಳು ಹಾಗೂ ಕಂಟ್ರೋಲ್ ರೂಂ ಉಸ್ತುವಾರಿಯಾಗಿ ಮುಂದುವರೆಯಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net