

ಬೆಂಗಳೂರು: ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ಧಿಯ ಕಸರತ್ತುಗಳನ್ನು ಖಂಡಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಗಡಿಭಾಗದಲ್ಲಿಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಘೊಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ ಎಂದು ಎಚ್ಚರಿಸಿದ್ದಾರೆ.
ವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.