ದಸರಾ ಮುಗಿಯುತ್ತಿದ್ದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಬಿ.ವೈ.ವಿಜಯೇಂದ್ರ

cm resignation
Published on

ಮೈಸೂರು: ಇಂದು ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ (Resign) ಕ್ಷಣಗಣನೆ ಆರಂಭವಾಗಿದೆ. ದಸರಾ ಮುಗಿಯುತ್ತಿದ್ದಂತೆ ಸಿಎಂ ಸ್ಥಾನಕ್ಕೆ ಅವರು ರಾಜೀನಾಮೆ ನೀಡುವ ದಿನಾಂಕ ಈಗಾಗಲೇ ನಿಗದಿಯಾಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

"ನಾನು ರಾಜಕೀಯ ಹೇಳಿಕೆಯನ್ನು ಕೊಡ್ತಿಲ್ಲ. ದಸರಾ ಸಂದರ್ಭದಲ್ಲಿ ಹೇಳ್ತಿದ್ದೇನೆ, ಯಾವ ಸಂದರ್ಭದಲ್ಲಿಯಾದರೂ ಅವರು ರಾಜೀನಾಮೆ ಕೊಡ್ತಾರೆ. ಅಂತಹ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನ ಹೈಕಮಾಂಡ್ ಕೂಡ ರಾಜೀನಾಮೆ ಪಡೆಯುವ ಚಿಂತನೆ ನಡೆಸಿದೆ. ಅಲ್ಲಿ ಏನು ಚರ್ಚೆಯಾಗುತ್ತಿದೆ ಎಂಬುದು ಮುಖ್ಯಮಂತ್ರಿಗಳಿಗೂ ಗೊತ್ತಿದೆ" ಎಂದರು.

"ಸಿಎಂ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅಷ್ಟೇ ಅಲ್ಲ. ಏಳೆಂಟು ಜನ ಸಿಎಂ ಖುರ್ಚಿಗೆ ಟವಲ್ ಹಾಕಿ ಕುಳಿತಿದ್ದಾರೆ. ಯಾರು ಮುಖ್ಯಮಂತ್ರಿ ಆಗುತ್ತಾರೋ ನಮಗೆ ಗೊತ್ತಿಲ್ಲ. ಅದು ಕಾಂಗ್ರೆಸ್‌ನ ಆಂತರಿಕ ವಿಚಾರ. ಆದರೆ, ಸಿದ್ದರಾಮಯ್ಯ ಮಾತ್ರ ಅಧಿಕಾರದಲ್ಲಿ ಇರುವುದಿಲ್ಲ ಎಂಬುದು ಮಾತ್ರ ಸತ್ಯ" ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net