ಸ್ವಯಂಕೃತ ಅಪರಾಧದಿಂದ ಸಿದ್ದರಾಮಯ್ಯ ಸಿಎಂ ಸೀಟ್​ನಿಂದ ಕೆಳಗಿಳಿಯಲಿದ್ದಾರೆ: ಮಾಜಿ CM ಡಿ.ವಿ.ಸದಾನಂದಗೌಡ

dk - 2025-02-12T152839.569
Published on

ಮೈಸೂರು: ಸ್ವಯಂಕೃತ ಅಪರಾಧದಿಂದ ಸಿದ್ದರಾಮಯ್ಯ ಕೆಳಗೆ ಇಳಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ(CM)ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮಂಗಳವಾರ ಸುದ್ದಗಾರರ ಜೊತೆ ಮಾತನಾಡಿದರು. ಸಿಎಂ ತಲೆಯಲ್ಲಿ ಬರೀ ಮುಡಾ ತುಂಬಿದೆ. ಸಿದ್ದರಾಮಯ್ಯ ಹೆಸರಿನಲ್ಲಿ ಇರುವ 'ಸಿದ್ದ' ಎಂಬುದನ್ನು ತೆಗೆಯಬೇಕಾದ ಸ್ಥಿತಿ ಬಂದಿದೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದಾಗ ಬದಲಾಗಿದ್ದಾರೆ ಎಂದು ಮಾಜಿ ಸಿಎಂ ವ್ಯಂಗ್ಯವಾಡಿದ್ದಾರೆ.

ಪರಮೇಶ್ವರ್​ಗೆ ಕಾನೂನು ಸುವ್ಯವಸ್ಥೆ ನಿಭಾಯಿಸಲು ಬರುತ್ತಿಲ್ಲ. ಪರಮೇಶ್ವರ್ ಕೇವಲ ಕುರ್ಚಿಗೆ ಅಂಟಿಕೊಂಡು ಕೂತಿದ್ದಾರೆ. ರಾಜಣ್ಣ, ಜಾರಕಿಹೊಳಿ, ಪರಮೇಶ್ವರ್ ಯಾರು ಮಂತ್ರಿ ಕೆಲಸ ಮಾಡುತ್ತಿಲ್ಲ. ಬರೀ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದು ಅತ್ಯಂತ ಭ್ರಷ್ಟ ಸರ್ಕಾರ. ಎರಡು ಕಡೆ ಪುಣ್ಯಸ್ನಾನ ಮಾಡಿದ ಡಿ.ಕೆ.ಶಿವಕುಮಾರ್ ಅವರ ಪಾಪ ಸ್ವಲ್ಪ ಪರಿಹಾರ ಆಗಿರಬಹುದು. ಸ್ವಯಂಕೃತ ಅಪರಾಧದಿಂದ ಸಿದ್ದರಾಮಯ್ಯ ಕೆಳಗೆ ಇಳಿಯುತ್ತಾರೆ. ಹೈಕಮಾಂಡ್ ಬೆಂಬಲದಿಂದಷ್ಟೇ ಡಿಕೆಶಿ ಶಿವಕುಮಾರ್ ಮುಖ್ಯಮಂತ್ರಿ ಆಗಬಹುದು ಎಂದರು.

ಮೆಟ್ರೋ ದರ ಏರಿಕೆ ವಿಚಾರ

ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಮಾತನಾಡಿದ ಡಿವಿಎಸ್​, ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ. ರಾಜ್ಯ ಸರ್ಕಾರ ವಿಶೇಷ ಒತ್ತಡ ಹಾಕುವುದು ಪ್ರಥಮ ಜವಾಬ್ದಾರಿ. ಮೆಟ್ರೋ ದರ ಕಡಿಮೆ ಆಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯ ಸರ್ಕಾರ ಕರೆದರೆ ಕೇಂದ್ರದ ಬಳಿಗೆ ನಾವು ಜೊತೆಯಾಗಿ ಹೋಗುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net