

ಬೆಂಗಳೂರು: ಕರ್ನಾಟಕ ಸರ್ಕಾರ ಪಾಪರ್ ಆಗಿದೆ ಅನ್ನುತ್ತಾರೆ. ಪಾಪರ್ ಡೆಫನಿಷನ್ ಗೊತ್ತಾ ಪ್ರತಿಪಕ್ಷ ನಾಯಕ ಅಶೋಕನಿಗೆ? ಅವು ಯಾರದ್ದಾರೂ ಸಂಬಳ ನಿಲ್ಲಿಸಿದ್ದೇವೆ, ಬಜೆಟ್ ಘೋಷಿತ ಅನುದಾನ ನಿಲ್ಲಿಸಿದ್ದಿವಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಅಶೋಕನಿಗೆ ದೇಶದ ಎಕಾನಮಿ ಬಗ್ಗೆ ಗೊತ್ತಿದೆಯೋ ಇಲ್ಲವೋ? ತಿಳಿಯದು. ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್‌ಗೆ ಇದೆಲ್ಲಾ ಅರ್ಥ ಆಗಲ್ಲ, ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.
ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮೇಲೆ ಕೇಂದ್ರ ಅಬಕಾರಿ ಸುಂಕ 9.48 ರೂಗಳಷ್ಟಿತ್ತು. 2020ರ ಮೇ ನಲ್ಲಿ 32.98 ರೂ.ಗಳಿಗೆ ಹೆಚ್ಚಾಗಿದೆ. ಈ ಮಟ್ಟದ ಏರಿಕೆ ವಿರುದ್ಧ ಬಿಜೆಪಿಯವರಾಗಲೀ, ಆರ್.ಅಶೋಕ್ ಆಗಲಿ ಬಾಯಿ ಬಿಟ್ಟಿಲ್ಲ. ಅವರಿಗೆ ಅರ್ಥ ಆಗಿದ್ದರೆ ತಾನೆ ಎಂದು ವ್ಯಂಗ್ಯಮಾಡಿದರು.