ಸಿದ್ದೇಶ್ವರ ಬ್ಯಾಂಕ್‌ನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published on

ರಾಣೆಬೆನ್ನೂರ: ಇಲ್ಲಿಯ ಸಿದ್ದೇಶ್ವರ ಕೋ ಅಪರೇಟಿವ್ ಬ್ಯಾಂಕ್ ವತಿಯಿಂದ ವೀರಶೈವ ಲಿಂಗಾಯತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಎಸ್ಸೆಸ್ಸೆಲ್ಸಿ, ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾದ್ಯಮ ಶಾಲೆಯಲ್ಲಿ ಹೆಚ್ಚು ಅಂಕ ಪಡೆದ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗ, ವಾಣಿಜ್ಯ ವಿಭಾಗ ಮತ್ತು ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಆ. 22ರೊಳಗೆ ಮೂಲ ಅಂಕ ಪಟ್ಟಿಯ ಹಾಗೂ ವರ್ಗಾವಣೆ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳೊಂದಿಗೆ ಲಯನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯಶಿಕ್ಷಕರ ಬಳಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net