ಹೆಣ್ಣು ಮಗುವಿಗೆ ತಾಯಿಯಾದ ‘ಟಾಕ್ಸಿಕ್’ ನಟಿ ಕಿಯಾರಾ ಅಡ್ವಾಣಿ..Kiara Advani Welcome A Baby Girl

Kiara Advani - Siddarth Malhotra Reception
Published on

Kiara Advani Welcome A Baby Girl :  ನಟಿ  ಕಿಯಾರಾ ಅಡ್ವಾಣಿ ಹಾಗೂ ಪತಿ ಸಿದ್ದಾರ್ಥ್ ಮಲ್ಹೋತ್ರಾ ದಂಪತಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ. ಕಿಯಾರಾ ಮತ್ತು ಸಿದ್ಧಾರ್ಥ್ ಮದುವೆಯಾದ ಸುಮಾರು ಎರಡೂವರೆ ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದು, ಮನೆಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ.

ಕಿಯಾರಾ ಮತ್ತು ಸಿದ್ಧಾರ್ಥ್ ಮೊದಲು ಭೇಟಿಯಾದದ್ದು 'ಲಸ್ಟ್ ಸ್ಟೋರೀಸ್' ಚಿತ್ರದ ಮುಕ್ತಾಯ ಪಾರ್ಟಿಯಲ್ಲಿ. ಈ ಪರಿಚಯ ಮೊದಲು ಸ್ನೇಹವಾಗಿ, ನಂತರ ಕ್ರಮೇಣ ಪ್ರೀತಿಯಾಗಿ ಬದಲಾಯಿತು. 2019 ರಲ್ಲಿ, ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹುಟ್ಟಿಕೊಂಡವು. ನಂತರ 2021 ರಲ್ಲಿ, ಕಿಯಾರಾ ಮತ್ತು ಸಿದ್ಧಾರ್ಥ್ ಪರಸ್ಪರರ ಕುಟುಂಬಗಳನ್ನು ಭೇಟಿಯಾದರು. ಅಂತಿಮವಾಗಿ ಅವರು 2023 ರಲ್ಲಿ ವಿವಾಹವಾದರು.

ಕಿಯಾರಾ ಇತ್ತೀಚೆಗೆ ಮೆಟ್ ಗಾಲಾ ಫ್ಯಾಷನ್ ಈವೆಂಟ್ 2025 ರಲ್ಲಿ ಬೇಬಿ ಬಂಪ್‌ನೊಂದಿಗೆ ಭಾಗವಹಿಸಿ ಎಲ್ಲರ ಗಮನ ಸೆಳೆದರು. ಈ ಮಧ್ಯೆ, ಕಿಯಾರಾ ಅಡ್ವಾಣಿ ಮಗುವಿಗೆ ಜನ್ಮ ನೀಡಿರುವುದರಿಂದ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕಿಯಾರಾ ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಕಿಯಾರಾ ಅವರು ಕನ್ನಡದ ‘ಟಾಕ್ಸಿಕ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​ ದಾಸ್ ನಿರ್ದೇಶನ ಇದೆ. ಅವರು ಈ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಪ್ರೆಗ್ನೆನ್ಸಿಗೆ ಪ್ಲ್ಯಾನ್ ಮಾಡಿದ್ದರು. ಅವರು ತಮ್ಮ ಭಾಗದ ಶೂಟ್​ನ ಮುಗಿಸಿಕೊಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net