ಯುವನಿಧಿ ಅಂಗವಾಗಿ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನ

yuvanidhi sahi abhiyana
ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಇತರರಿದ್ದರು.
Published on

ಶಿವಮೊಗ್ಗ: ರಾಜ್ಯ ಸರ್ಕಾರದ ಯುವನಿಧಿ ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗದ ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹಣಾ ಅಭಿಯಾನ ನಡೆಯಿತು.

ಕೌಶಾಲಾಭಿವದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಅಂಧ ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿ ಕೂಡ ಈ ಅಭಿಯಾನಕ್ಕೆ ಸಹಿ ಹಾಕುವುದರ ಮೂಲಕ ಯುವನಿಧಿಗೆ ಬೆಂಬಲ ವ್ಯಕ್ತಪಡಿಸಿದರು.
ಶಾಸಕ ಬೇಳೂರು ಗೋಪಾಲಕೃಷ್ಣ, ಕಾಲೇಜಿನ ಪ್ರಾಚಾರ್ಯ ಎಂ. ವೆಂಕಟೇಶ್, ಆಡಳಿತ ಮಂಡಳಿ ನಿರ್ದೇಶಕ ಎಸ್.ಪಿ.ದಿನೇಶ್, ಕಾಂಗ್ರೆಸ್ ಪ್ರಮುಖರಾದ ಎಚ್.ಸಿ.ಯೋಗೀಶ್, ಅನಿತಾ ಕುಮಾರಿ, ಶಿವಕುಮಾರ್, ಅಫ್ತಾಬ್ ಫರ್ವೀಜ್, ಮಧು, ವಿಶ್ವನಾಥ್ ಕಾಶಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net