ಇಟಲಿ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ ನಿಧನ

Silvio Berlusconi
Published on

ರೋಮ್: ಇಟಲಿ ದೇಶದ ಮಾಜಿ ಪ್ರಧಾನ ಮಂತ್ರಿ, ಉದ್ಯಮಿ ಸಿಲ್ವಿಯೋ ಬೆರ್ಲುಸ್ಕೋನಿ(86) ಸೋಮವಾರ ನಿಧನರಾಗಿದ್ದಾರೆ.

ಬ್ಲಡ್​ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಸಂಬಂಧಿ ಕಾಯಿಲೆ, ಪ್ರಾಸ್ಟೇಟ್​ ಕ್ಯಾನ್ಸರ್​ನಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

1936, ಸೆಪ್ಟೆಂಬರ್​ 29ರಂದು ಜನಿಸಿದ ಸಿಲ್ವಿಯೋ ಬೆರ್ಲುಸ್ಕೋನಿ ಮೂರು ಬಾರಿ ಇಟಲಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net