ಬಾಲರಾಮನ ದರ್ಶನ ಪಡೆದ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ

rakshit
Published on

ಬೆಂಗಳೂರು: ಸ್ಯಾಂಡಲ್​ವುಡ್​ ನಟ ರಕ್ಷಿತ್‌ ಶೆಟ್ಟಿ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿವೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಲರಾಮ ಮಂದಿರವನ್ನು ನೋಡಲು ರಕ್ಷಿತ್‌ ಶೆಟ್ಟಿ ಅವರು ತಮ್ಮ ಗೆಳೆಯರ ಜತೆ ಅಯೋಧ್ಯೆಗೆ ತೆರಳಿದ್ದಾರೆ. ರಾಮನ ದರ್ಶನವನ್ನು ಪಡೆದಿದ್ದಾರೆ. ಮಂದಿರದ ಮುಂದೆ ನಿಂತಿರುವ ಫೋಟೊಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ರಕ್ಷಿತ್ ಶೆಟ್ಟಿ ಅವರು ಸಾಂಪ್ರದಾಯಿಕ ಸ್ಟೈಲ್‌ನಲ್ಲಿ ಅವರು ದೇಗುಲಕ್ಕೆ ಭೇಟಿ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ದೈವಭಕ್ತರು. ಉಡುಪಿ ಮೂಲದ ರಕ್ಷಿತ್ ಶೆಟ್ಟಿ ಅವರು ಆದಾಗೆಲ್ಲ ಅಲ್ಲಿನ ದೇಗುಲಗಳಿಗೆ ಭೇಟಿ ನೀಡುತ್ತಾರೆ.

ಕ್ಷಿತ್ ಶೆಟ್ಟಿ  ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಟೆಂಪಲ್ ರನ್ ಕೂಡ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಇದೀಗ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net