ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿ; ಬಿಇಒ ಶರಣಪ್ಪ ವಟಗಲ್ ಅನಿಸಿಕೆ

14112022 sindhanour pratibha karanji
Published on

ಸಿಂಧನೂರು: ಮಕ್ಕಳಲ್ಲಿ ವಿಶೇಷ ಪ್ರತಿಭೆ ಇದ್ದು, ಅದನ್ನು ಗುರುತಿಸಿ ಬೆಳೆಸಲು ಪ್ರತಿಭಾ ಕಾರಂಜಿ ಸಹಾಯಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ವಟಗಲ್ ಹೇಳಿದರು.

ನಗರದ ಖದರಿಯಾ ಕಾಲನಿಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ತಾಲೂಕು ಮಟ್ಟದ ಉರ್ದು ಮಾಧ್ಯಮ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀಮಂತ ಸಂಸ್ಕೃತಿ ಬಿಂಬಿಸುವ ನಮ್ಮ ಗ್ರಾಮೀಣ ಕಲೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕಿದೆ. ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದೆ ಎಂದರು.

ನಗರಸಭೆ ಸದಸ್ಯ ಶಬ್ಬೀರ್ ಅಹ್ಮದ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಉರ್ದು ಶಿಕ್ಷಕರ ಸಂಘದ ಅಧ್ಯಕ್ಷ ನಯೀಮ್ ಪಾಷಾ, ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ವೇದಿಕೆ ಅಧ್ಯಕ್ಷ ಮುಬಾರಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಉಪಾಧ್ಯಕ್ಷ ಅಲಿಮುದ್ದೀನ್, ಪ್ರಮುಖರಾದ ಚನ್ನವೀರನಗೌಡ, ಪ್ರಮೋದ್, ಹನುಮಂತಪ್ಪ, ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net