ಚಿಕಿತ್ಸೆಗೆ ಸ್ಪಂದನೆ, ವೈದ್ಯರನ್ನು ಗುರುತಿಸುತ್ತಿದ್ದಾರೆ; ಎಸ್​ಪಿಬಿ ಪುತ್ರ ಚರಣ್​

Untitled
Published on

ಇತ್ತೀಚೆಗಷ್ಟೇ ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಕರೊನಾ ವರದಿ ನೆಗೆಟಿವ್​ ಬಂದಿದೆ ಎಂಬ ಸುದ್ದಿ ಹರಿದಾಡಿತ್ತು. ಆ ಸುದ್ದಿಯನ್ನು ಪುತ್ರ ಎಸ್​ಪಿ ಚರಣ್​ ತಳ್ಳಿಹಾಕಿ, ಅಪ್ಪನ ಸ್ಥಿತಿ ಸ್ಥಿರವಾಗಿದ್ದು, ಅವರಿಗೆ ವೆಂಟಿಲೇಟರ್​ ಸಹಾಯದ ಮೂಲಕವೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಚಿತ ಮಾಹಿತಿ ಒದಗಿಸಿದ್ದರು. ಇದೀಗ ಮಂಗಳವಾರದ ಸ್ಥಿತಿ ಹೇಗಿದೆ ಎಂಬುದನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

‘ಎಲ್ಲವೂ ಸಹಜವಾಗಿದೆ. ಮೊದಲಿಗಿಂತ ಸುಧಾರಣೆ ಕಂಡು ಬಂದಿದೆ. ಖುಷಿಯ ವಿಚಾರ ಏನೆಂದರೆ ಎಲ್ಲರನ್ನೂ ಗುರುತಿಸುತ್ತಿದ್ದಾರೆ. ಎಲ್ಲರ ಪ್ರಾರ್ಥನೆಯಿಂದ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದೆ. ಶೀಘ್ರದಲ್ಲಿ ಅವರು ಮೊದಲಿನಂತೆ ನಮ್ಮ ಜತೆ ಬೆರೆಯಲಿದ್ದಾರೆ ಎಂಬ ನಂಬಿಕೆ ಇದೆ‘ ಎಂದು ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.

ಕರೊನಾ ವರದಿ ನೆಗೆಟಿವ್​ ಬಂದಿದೆ ಎಂಬ ಸುದ್ದಿ ಹರಿದಾಡಿದ್ದರಿಂದ ವದಂತಿಗಳಿಗೆ ದಯಮಾಡಿ ಕಿವಿಗೊಡಬೇಡಿ. ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ‘ಅಪ್ಪನ ಸ್ಥಿತಿ ಈ ಮೊದಲು ಹೇಗಿತ್ತೋ ಈಗಲೂ ಹಾಗೆಯೇ ಸ್ಥಿರವಾಗಿದೆ. ವೆಂಟಿಲೇಟರ್​ ಸಹಾಯದ ಮೂಲಕವೇ ಚಿಕಿತ್ಸೆ ಮುಂದುವರಿಸಲಾಗಿದೆ. ದಯಮಾಡಿ ಸುಳ್ಳು ಸುದ್ದಿಯನ್ನು ಹರಡಬೇಡಿ’ ಎಂದಿದ್ದರು.

ಆಗಸ್ಟ್​ 5ರಂದು ಎಸ್​ಪಿಬಿ ಅವರಲ್ಲಿ ಕರೊನಾ ದೃಢಪಟ್ಟಿತ್ತು. ಅಂದಿನಿಂದಲೂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net