ಗಾಯಕಿ ಸುಶ್ಮಿತಾ ಆತ್ಮಹತ್ಯೆ ಪ್ರಕರಣ: ಪತಿ ಸೇರಿದಂತೆ ಮೂವರು ಆರೋಪಿಗಳ ಬಂಧನ

Sushmitha Suicide
Published on

ನವದೆಹಲಿ: ಗಾಯಕಿ ಸುಶ್ಮಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿನಗರ ಠಾಣಾ ಪೊಲೀಸರು ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸುಶ್ಮಿತಾ ಪತಿ ಶರತ್ ಕುಮಾರ್, ದೊಡ್ಡಮ್ಮ ವೈದೇಹಿ ಹಾಗೂ ಸಹೋದರಿ ಗೀತಾ ಎಂಬುವರನ್ನು ಬಂಧಿಸಲಾಗಿದೆ. ಫೆ.16ರ ರಾತ್ರಿ ಮಾಳಗಾಳದಲ್ಲಿರುವ ತಾಯಿಯ ಮನೆಯಲ್ಲಿ ಸುಶ್ಮಿತಾ ಆತ್ಮಹತ್ಯೆಗೆ ಶರಣಾಗಿದ್ದರು.

ಸಾವಿಗೂ ಮೊದಲು ತನ್ನ ಸಹೋದರ ಹಾಗೂ ತಾಯಿಗೆ ಸುಶ್ಮಿತಾ ಸಂದೇಶ ರವಾನಿಸಿದ್ದರು. ತನ್ನ ಸಾವಿಗೆ ಪತಿ, ಆತನ‌ ದೊಡ್ಡಮ್ಮ ಹಾಗೂ ಸಹೋದರಿಯೇ ಕಾರಣ. ಮೂವರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ದರು.

ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಪಾಂಡವಪುರದ ಸಂಬಂಧಿಕರ ಮನೆಯಲ್ಲಿ ಅವಿತಿದ್ದ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net