ಜೂ.30ರಿಂದ ಬಿಎಲ್‌ಒಗಳಿಂದ ಎಸ್‌ಐಆರ್ ಮನೆ ಭೇಟಿ

ಭಾರತದ ಚುನಾವಣಾ ಆಯೋಗದ ಆದೇಶದಂತೆ ದ.ಕ. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣ (ಎಸ್‌ಐಆರ್) ಜೂ.30ರಿಂದ ಬಿಎಲ್‌ಒಗಳ ಮನೆ ಭೇಟಿಯ ಮೂಲಕ ಆರಂಭಗೊಳ್ಳಲಿದೆ. ಈ ಮನೆ ಭೇಟಿ ಪ್ರಕ್ರಿಯೆ ಜುಲೈ 29ರವರೆಗೆ ನಡೆಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
ಭಾರತದ ಚುನಾವಣಾ ಆಯೋಗದ ಆದೇಶದಂತೆ ದ.ಕ. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣ (ಎಸ್‌ಐಆರ್) ಜೂ.30ರಿಂದ ಬಿಎಲ್‌ಒಗಳ ಮನೆ ಭೇಟಿಯ ಮೂಲಕ ಆರಂಭಗೊಳ್ಳಲಿದೆ. ಈ ಮನೆ ಭೇಟಿ ಪ್ರಕ್ರಿಯೆ ಜುಲೈ 29ರವರೆಗೆ ನಡೆಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
Published on
ಮಂಗಳೂರು: ಭಾರತದ ಚುನಾವಣಾ ಆಯೋಗದ ಆದೇಶದಂತೆ ದ.ಕ. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣ (ಎಸ್‌ಐಆರ್) ಜೂ.30ರಿಂದ ಬಿಎಲ್‌ಒಗಳ ಮನೆ ಭೇಟಿಯ ಮೂಲಕ ಆರಂಭಗೊಳ್ಳಲಿದೆ. ಈ ಮನೆ ಭೇಟಿ ಪ್ರಕ್ರಿಯೆ ಜುಲೈ 29ರವರೆಗೆ ನಡೆಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಈ ಎಸ್‌ಐಆರ್ ಜೂ. 1ರಿಂದ ಅರ್ಹತಾ ದಿನವನಾಗಿ ಪರಿಗಣಿಸಿ ಪ್ರಕ್ರಿಯೆ ಆರಂಭಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಈ ಪ್ರಕ್ರಿಯೆಗೆ ಸಂಬಂಧಿಸಿದ ಅಧಿಕಾರಿಗಳ ಸಿದ್ಧತೆ, ತರಬೇತಿ ಮತ್ತು ಮುದ್ರಣ ಕಾರ್ಯ ಜೂ. 20ರಿಂದ ಜೂ. 29ರವರೆಗೆ ನಡೆಯಲಿದೆ. ಬಳಿಕ ಒಂದು ತಿಂಗಳು ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒಗಳು) ಮನೆ ಭೇಟಿ ಮಾಡಲಿದ್ದಾರೆ. ಜುಲೈ 29ರೊಳಗೆ ಮತಗಟ್ಟೆಗಳ ತಾರ್ಕಿಕ ಮರು ಹೊಂದಾಣಿಕೆ ನಡೆಯಲಿದೆ. ಎಸ್‌ಐಆರ್ ಅಪರ ಜಿಲ್ಲಾಧಿಕಾರಿ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿರುತ್ತಾರೆ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದ 8 ಜನ ಮತದಾರರ ನೋಂದಣಾಧಿಕಾರಿ (ಇಆರ್‌ಒ), 10 ಸಹಾಯಕ ಮತದಾರರ ನೋಂದಣಾಧಿಕಾರಿ (ಎಇಆರ್‌ಒ), 206 ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರು ಹಾಗೂ 1876 ಮತಗಟ್ಟೆ ಮಟ್ಟದ ಅಧಿಕಾರಿಗಳು ಈ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.
ಮಂಗಳೂರು ನಗರ ಉತ್ತರ ಮತ್ತು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮ್ಯಾಪಿಂಗ್‌ನಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರು ಹೊರಗುಳಿದಿದ್ದಾರೆ. ಬೆಳ್ತಂಗಡಿಯಲ್ಲಿ 9,637, ಮೂಡಬಿದಿರೆಯಲ್ಲಿ 20,128, ಮಂಗಳೂರು ನಗರ ಉತ್ತರದಲ್ಲಿ 50558, ಮಂಗಳೂರು ನಗರ ದಕ್ಷಿಣದಲ್ಲಿ 63,853, ಮಂಗಳೂರು ಕ್ಷೇತ್ರದಲ್ಲಿ 25,042, ಬಂಟ್ವಾಳದಲ್ಲಿ 14,430, ಪುತ್ತೂರಿನಲ್ಲಿ 15,802, ಸುಳ್ಯದಲ್ಲಿ 7016 ಮಂದಿ ಮತದಾರರು ಈಗಾಗಲೇ ನಡೆದಿರುವ ಮ್ಯಾಪಿಂಗ್‌ಗೆ ಒಳಪಟ್ಟಿಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.ಪರಿಷ್ಕರಣೆ ಪ್ರಕ್ರಿಯೆ, ನಮೂನೆಗಳು ಹಾಗೂ ವೇಳಾಪಟ್ಟಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಆಕರಿಗಳ ಅಧಿಕೃತ ಜಾಲತಾಣಗಳು, ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಹಾಗೂ ಭಾರತದ ಚುನಾವಣಾ ಆಯೋಗದ ಅಧಿಕೃತ ಜಾಲತಾಣಗಳಲ್ಲಿ ಪ್ರಕಟಿಸಲಾಗುವುದು. ಈಗಾಗಲೇ ರಾಜಕೀಯ ಪಕ್ಷಗಳ ಪ್ರಮುಖರ ಸಭೆ ನಡೆಸಿ ಆಯಾ ಮತಗಟ್ಟೆಗಳ ಚುನಾವಣಾ ಏಜೆಂಟ್‌ಗಳ ಮೂಲಕ ಪಟ್ಟಿಯಿಂದ ಬಿಟ್ಟು ಹೋದ ಮತದಾರ ಮಾಹಿತಿ ಸಂಗ್ರಹಿಸಿ ದಾಖಲೆ ನೀಡುವಂತೆ ಸೂಚನೆ ನೀಡಲಾಗಿದೆ. ಯಾವೊಬ್ಬ ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟುಹೋಗಬಾರದು. ಹಾಗೆಯೇ ಅನರ್ಹ ಮತದಾರರು ಪಟ್ಟಿಗೆ ಸೇರ್ಪಡೆಗೊಳ್ಳಬಾರದು ಎಂಬುದು ನಮ್ಮ ಉದ್ದೇಶ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಅಪರ ಜಿಲ್ಲಾಧಿಕಾರಿ ರಾಜು ಉಪಸ್ಥಿತರಿದ್ದರು.
-------------------
ಮ್ಯಾಪಿಂಗ್ ಆಗದವರು ದಾಖಲೆ ನೀಡಿ
ದ.ಕ. ಜಿಲ್ಲೆಯ ಪ್ರಸಕ್ತ 18,05,189 ಮತದಾರರಲ್ಲಿ 15,98,723ರಷ್ಟು ಮತದಾರರು 2002ರ ಮತದಾರರ ಪಟ್ಟಿಯಲ್ಲಿ ಇದ್ದ ವಿವರ/ ಸಂಬಂಧಿಯ ಮಾಹಿಯನ್ನು ಬಿಎಲ್‌ಒಗಳಿಗೆ ನೀಡಿ 2025ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಕಾರ್ಯ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಶೇ. 88.56ರಷ್ಟು ಮ್ಯಾಪಿಂಗ್ ಕಾರ್ಯ ನಡೆದಿದೆ. ಉಳಿದ 2,06,723 ಮತದಾರರು ಇನ್ನೂ ಎಸ್‌ಐಆರ್‌ಗೆ ಒಳಪಟ್ಟಿಲ್ಲ. ಹಾಗಾಗಿ ಅರ್ಹ ಮತದಾರರು ಬಿಎಲ್‌ಒಗಳ ಮೂಲಕ ದಾಖಲೆ ನೀಡಿದರೆ ಅನುಕೂಲ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದರು.
--------------------
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net