

ಭೋಪಾಲ್: ಕೆಲವೊಮ್ಮೆ ಸಣ್ಣ ಜಗಳಗಳು ದೊಡ್ಡ ಮಟ್ಟದ ಸಮಸ್ಯೆಗೆ ದಾರಿ ಮಾಡಿಕೊಡುತ್ತವೆ ಎನ್ನುವುದಕ್ಕೆ ಸಾಕ್ಷಿಯಾದ ಘಟನೆಯೊಂದು ನಡೆದಿದೆ. ಸಹೋದರನ ಜೊತೆ ಜಗಳವಾಡಿ 18ರ ಯುವತಿ ಮೊಬೈಲ್ ಫೋನ್ ನುಂಗಿ ಎಡವಟ್ಟು ಮಾಡಿಕೊಂಡಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಭಿಂಡ್ ಪ್ರದೇಶದಲ್ಲಿ ನಡೆದಿದೆ.
ಯುವತಿ ಮೊಬೈಲ್ ನುಂಗಿದ ಕೂಡಲೇ ತೀವ್ರ ನೋವಿನಿಂದ ನರಳಲಾರಂಭಿಸಿದಳು. ಶುಕ್ರವಾರ ಆಕೆಯನ್ನು ಗ್ವಾಲಿಯರ್ನ ಜೈರೋಗ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ಅನ್ನು ಆಕೆ ಹೊಟ್ಟೆಯಿಂದ ತೆಗೆಯಲಾಗಿದೆ. ಸದ್ಯ ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಈ ಘಟನೆಯನ್ನರಿತ ವೈದ್ಯರೇ ಒಂದು ಬಾರಿ ದಂಗಾಗಿದ್ದಾರೆ. ಇಬ್ಬರ ನಡುವಿನ ಜಗಳಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯಯಿಂದ ಪಾರಾಗಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ.