SIT Custody | ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಮುನಿರತ್ನಗೆ 12 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ಕೋರ್ಟ್

mla munirtha sit custdy
Published on

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 12 ದಿನ ಎಸ್ಐಟಿ ಕಸ್ಟಡಿಗೆ SIT Custody ನೀಡಿ 42ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶ ನೀಡಿದ್ದಾರೆ.

ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ದ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬೆಳಿಗ್ಗೆ ಬಂಧಿಸಲಾಗಿದ್ದು, ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಇದರ ಬೆನ್ನಲ್ಲೆ ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶಿಸಿದೆ.

ಜಾತಿನಿಂದನೆ, ಕೊಲೆ ಬೆದರಿಕೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರು ಬಂಧನದಲ್ಲಿದ್ದಾರೆ. ಜಾತಿ ನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದಿಂದ ಜಾಮೀನು ಸಿಕ್ಕರೂ, ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಅವರನ್ನು ಕಗ್ಗಲೀಪುರ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ಮುನಿರತ್ನ ಬಳಿ ಹಲವಾರು ಖಾಸಗಿ ಅಶ್ಲೀಲ ವಿಡಿಯೋಗಳಿವೆ. ರಾಜಕೀಯ ಎದುರಾಳಿಗಳನ್ನು ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯಗೆ ನಿಯೋಗದ ಮೂಲಕ ಮನವಿ  SIT Custody

ಈ ನಡುವೆ ಶಾಸಕ ಮುನಿರತ್ನ ಅವರದ್ದು ಎನ್ನಲಾಗಿರುವ ಆಡಿಯೋದಲ್ಲಿ ಒಕ್ಕಲಿಗರ ಸಮುದಾಯ ಮತ್ತು ದಲಿತರ ಬಗ್ಗೆ ಅವಾಚ್ಯವಾಗಿ ನಿಂದಿಸಿದ ಹಿನ್ನೆಲೆಯಲ್ಲಿ ಹಾಗೂ ಅವರ ವಿರುದ್ದ ಹಲವು ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ರಚನೆ ಮಾಡಬೇಕು ಎಂದು ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಶಾಸಕರು ಮನವಿ ಮಾಡಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೂ ನಿಯೋಗದ ಮೂಲಕ ಮನವಿ ಸಲ್ಲಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಮೂಲಕ ಮುನಿರತ್ನ ಅವರ ವಿರುದ್ಧದ ಆರೋಪಗಳು ಸಮಗ್ರವಾಗಿ ತನಿಖೆಗೆ ಒಳಪಡಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net