

ಬೆಂಗಳೂರು: ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ವಿಧಿಸಿದೆ. ಇದರಿಂದಾಗಿ ವಿಚಾರಣೆಗೆ ತಾತ್ಕಾಲಿಕ ತಡೆ ಬಿದ್ದಿದ್ದು, ಸದ್ಯಕ್ಕೆ ಬಿಗ್ ರಿಲ್ೀ ದೊರೆತಂತಾಗಿದೆ.
ಸರ್ಕಾರಿ ಜಮೀನು ಒತ್ತುವರಿ ಆರೋಪದ ಬಗ್ಗೆ ಎಸ್‌ಐಟಿ ತನಿಖೆ ಪ್ರಶ್ನಿಸಿ ಕೇಂದ್ರ ಸಚಿವ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ಸರ್ಕಾರ ಎಸ್‌ಐಟಿ ರಚಿಸಿ ಆದೇಶಿಸಿದ ಬಳಿಕ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಹೀಗಾಗಿ, ಇದು ಸರ್ಕಾರದ ಆದೇಶವಾಗಿದ್ದು, ಅಧಿಸೂಚನೆ ಆಗುವುದಿಲ್ಲ. ಇದರ ಮುಂದುವರಿದ ಭಾಗವಾಗಿ ಎಸ್‌ಐಟಿ ಕೈಗೊಂಡಿರುವ ಕ್ರಮಗಳು ಕಾನೂನುಬಾಹಿರ. ಆದ್ದರಿಂದ ಎಸ್‌ಐಟಿ ರಚಿಸಿರುವ ಸರ್ಕಾರದ ಆದೇಶದ ನಂತರ ಕಂದಾಯ ಇಲಾಖೆಯ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳನ್ನು ಅಕ್ರಮ ಎಂದು ಘೋಷಿಸಬೇಕು. ಈ ಸಂಬಂಧ ಮೇ 29ರಂದು ನೀಡಿದ್ದ ಸಮನ್ಸ್ ರದ್ದುಪಡಿಸಬೇಕು’ ಎಂದು ಪೀಠಕ್ಕೆ ಕೋರಿದ್ದರು.
ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರವು ಜ. 28ರಂದು ಎಸ್‌ಐಟಿ ರಚಿಸಿರುವ ಆದೇಶದ ನಂತರ ಔಪಚಾರಿಕವಾಗಿ ಯಾವುದೇ ತೆರನಾದ ಅಧಿಸೂಚನೆಯನ್ನು ಪ್ರಕಟಿಸಿಲ್ಲ ಎಂಬುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ರಚಿಸಿರುವ ಆದೇಶ ಮತ್ತು ನಂತರ ಕುಮಾರಸ್ವಾಮಿ ಅವರಿಗೆ ಜಾರಿ ಮಾಡಿರುವ ಸಮನ್ಸ್‌ಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗಿದೆ.
ಅಲ್ಲದೇ, ಕಂದಾಯ ಇಲಾಖೆ ಮತ್ತು ರಾಮನಗರ ತಹಶೀಲ್ದಾರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ