ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಿರುವ ಎಸ್‌ಐಟಿ

Munirathna
Published on

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಗ್ಗಲಿಪುರ ಠಾಣೆ ಪೊಲೀಸರಿಂದ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನನನ್ನು ಸೋಮವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.
ಸೋಮವಾರ ಎಸ್‌ಐಟಿ ಅಧಿಕಾರಿಗಳು ಕೋರ್ಟ್ ಅರ್ಜಿ ಸಲ್ಲಿಸಿ ಮುನಿರತ್ನ ಅವರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡುವ ಸಾಧ್ಯತೆ ಇದೆ.
ಮುನಿರತ್ನ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲಿ ಮೂರು ಎ್ಐಆರ್ ದಾಖಲಾಗಿದ್ದು, ಇದರ ತನಿಖೆಯ ಜವಬ್ಧಾರಿಯನ್ನು ಎಸ್‌ಐಟಿಗೆ ವಹಿಸಿ ಶನಿವಾರ ರಾಜ್ಯ ಸರ್ಕಾರ ಆದೇಶಿಸಿದೆ. ಸಿಐಡಿ ಆರ್ಥಿಕ ಅಪರಾಧಗಳ ಎಡಿಜಿಪಿ ಬಿ.ಕೆ.ಸಿಂಗ್ ಎಸ್‌ಐಟಿ ಮುಖ್ಯಸ್ಥರಾಗಿದ್ದು, ಕೇಂದ್ರ ವಿಭಾಗದ ಐಜಿಪಿ ಲಾಭುರಾಮ್, ರೈಲ್ವೆ ಎಸ್.ಪಿ ಸೌಮ್ಯಲತಾ ಹಾಗೂ ಎಸ್.ಪಿ ಸಿ.ಎ.ಸೈಮನ್ ಅವರನ್ನು ತಂಡದ ಸದಸ್ಯರನ್ನಾಗಿ ನಿಯೋಜಿಸಲಾಗಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು ವೈಯ್ಯಲಿಕಾವಲ್ ಹಾಗೂ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ದಾಖಲೆಗಳ ಕತಡಗಳನ್ನು ಪಡೆದುಕೊಂಡಿದ್ದು, ಮುನಿರತ್ನ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಿದ್ದಾರೆ.

ವಿಚಾರಣಾಧೀನ ಕೈದಿ ಸಂಖ್ಯೆ ೯೨೭೩
ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಮುನಿರತ್ನಗೆ ೯೨೭೩ ವಿಚಾರಣಾಧೀನ ಕೈದಿ ನಂಬರ್ ನೀಡಲಾಗಿದೆ.

ಮುನಿರತ್ನ ಬೆಂಬಲಿಗರಿಂದ ಬೆದರಿಕೆ:
ಮತ್ತೊಂದೆಡೆ ಮುನಿರತ್ನ ಬೆಂಬಲಿಗರಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಸಂತ್ರಸ್ಥೆಯೊಬ್ಬರ ಮಗನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುನಿರತ್ನ ಬೆಂಬಲಿಗರ ವಿರುದ್ಧ ಆರೋಪ ಕೇಳಿ ಬಂದಿದೆ. ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತವೆ ಎಂದು ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಯಶವಂತರ ಪುರ ಠಾಣೆಗೆ ದೂರು ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net