ನೇಕಾರರಿಗೆ ರಿಯಾಯಿತಿ ದರದಲ್ಲಿ ವಿದ್ಯುತ್​: ಸಚಿವ ಶಿವಾನಂದ ಎಸ್​.ಪಾಟೀಲ ಭರವಸೆ

shivanand patil
Published on

ಬೆಂಗಳೂರು: ನೇಕಾರರಿಗೆ ರಿಯಾಯಿತಿ ದರದಲ್ಲಿ ವಿದ್ಯುತ್​ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್​.ಪಾಟೀಲ ತಿಳಿಸಿದರು.

ವಿಜಯನಗರ ಕಾಸಿಯಾ ಸಭಾಂಗಣದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ, ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕಾವೇರಿ ಹ್ಯಾಂಡ್​ಲೂಮ್ಸ್​, ನೇಕಾರರ ಸೇವಾ ಕೇಂದ್ರ ಹಾಗೂ ಕಾಸಿಯಾ ಜಂಟಿ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ 9ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ಕೈಮಗ್ಗ ನೇಕಾರರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ರಿಯಾಯಿತಿ ದರದಲ್ಲಿ ವಿದ್ಯುತ್​ ನೀಡುವಂತೆ ನೇಕಾರರು ಸಲ್ಲಿಸಿದ್ದ ಮನವಿಗೆ ಮುಖ್ಯಂತ್ರಿ ಸಿದ್ದರಾಮಯ್ಯ ಸಕಾರತ್ಮಾಕವಾಗಿ ಸ್ಪಂದಿಸಿದ್ದಾರೆ. ನೇಕಾರರನ್ನು ಉಳಿಸುವ ಇಚ್ಚಾಶಕ್ತಿ ಸರ್ಕಾರ ಹೊಂದಿದೆ. ಮುಂದಿನ ದಿನಗಳಲ್ಲಿ ಪಾರಂಪರಿಕ ನೇಕಾರಿಕೆ ಜತೆಗೆ ವೈಜ್ಞಾನಿಕ ಪದ್ಧತಿಯಲ್ಲಿ ನೇಕಾರಿಕೆಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net