VIDEO | ಟ್ರಕ್ ಅಡಿಗೆ ಸಿಲುಕಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿ; ಆಕ್ರೋಶಗೊಂಡು ಪೊಲೀಸರನ್ನೇ ಎಳೆದಾಡಿದ ಜನರು!

Truck
Published on

ಬಿಹಾರ: ಸಿವಾನ್​ನಲ್ಲಿ ಟ್ಯೂಷನ್​ಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲಾರಿಯೊಂದು ಹಾದುಹೋಗಿದೆ. ಪರಿಣಾಮ ಬಾಲಕಿ ಮೃತಪಟ್ಟಿದ್ದು, ಆಕ್ರೋಶಿತಗೊಂಡ ಜನರು ಲಾರಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಹೆದ್ದಾರಿ ಮಧ್ಯದಲ್ಲಿಯೇ ವಿದ್ಯಾರ್ಥಿನಿಯ ಶವ ಮುಂದಿಟ್ಟು ಆಕ್ರೋಶಿತ ಜನರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾ ನಿರತರನನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ವರದಿಯ ಪ್ರಕಾರ, ಸಿವಾನ್‌ನ ಮಹಾದೇವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಒರ್ಮಾ ಹೆದ್ದಾರಿಯಲ್ಲಿ ವಿದ್ಯಾರ್ಥಿನಿ ತನ್ನ ಕೋಚಿಂಗ್ ಕ್ಲಾಸ್‌ಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಿಂದ ಕೋಪಗೊಂಡ ಸ್ಥಳೀಯರು ಚಾಲಕನಿಗೆ ಥಳಿಸಿ ಲಾರಿಗೆ ಬೆಂಕಿ ಹಚ್ಚಿದ್ದಾರೆ.

ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪೊಲೀಸರು ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ಏರ್ಪಟ್ಟಿರುವುದು ಗೊತ್ತಾಗಿದೆ. ಉದ್ರಿಕ್ತಗೊಂಡ ಜನರನ್ನು ಮನವೋಲಿಸಲು ಬಂದ ಪೊಲೀಸ್ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net