ನಕಲಿ ಮದ್ಯ ಸೇವನೆ ಶಂಕೆ; ಆರು ಮಂದಿ ಮೃತ್ಯು

spurious liquor
Published on

ಹರಿಯಾಣ: ನಕಲಿ ಮದ್ಯ ಸೇವಿಸಿದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ ಹರಿಯಾನದ ಯಮುನಾನಗರ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಹಲವರು ಆಸ್ಪತ್ರೆಗೆ ದಾಖಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಮೃತರ ಸಾವಿಗೆ ನಿಖರ ಕಾರಣ ಪತ್ತೆಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ನಕಲಿ ಮದ್ಯ ಸೇವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ನಮಗೆ ಮಾಹಿತಿ ದೊರೆಯಿತು. ಮರಣೋತ್ತರ ಪರೀಕ್ಷೆಯ ವರದಿ ಕೈ ಸೇರಿದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಇನ್ನುಳಿದ ಐದು ಮಂದಿಯ ಅಂತ್ಯಸಂಸ್ಕಾರವನ್ನು ಅವರ ಕುಟುಂಬಸ್ಥರು ನೆರವೇರಿಸಿದ್ದಾರೆ.

ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಶೀಘ್ರದಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net