ಮದುವೆ ಮುಗಿಸಿ ವಾಪಸ್​ ಆಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು

Truck Car Accident
Published on

ನಾಗ್ಪುರ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟು, ಓರ್ವ ಚಿಂತಾಜನಕವಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಘಟನೆಯು ನಾಗ್ಪುರ ಹೊರವಲಯದಲ್ಲಿರುವ ಕಟೋಲ್-ಕಲ್ಮೇಶ್ವರ ರಸ್ತೆಯ ಸೋನ್‌ಖಾಂಬ್ ಗ್ರಾಮದ ಬಳಿ ನಡೆದಿದ್ದು, ಮೃತರನ್ನು ಮಯೂರ್ ಇಂಗಳೆ (22), ವೈಭವ್ ಚಿಖಲೆ (32), ಸುಧಾಕರ್​ ಮಾನಕರ್​ (42), ವಿಠ್ಠಲ್ ತೋಟೆ (45), ಅಜಯ್ ಚಿಖಲೆ (40) ಮತ್ತು ರಮೇಶ ಹಲೊಂಡೆ ಎಂದು ಗುರುತಿಸಲಾಗಿದೆ. ಜಗದೀಶ್ ಧೋನ್ ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸಂಬಂಧಿಕರೊಬ್ಬರ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವಾಪಸ್​ ಆಗುತ್ತಿದ್ದ ವೇಳೆ ಘಟನೆ ನಡೆದಿದ್ದು, ನಾಗ್ಪುರ ಹೊರವಲಯದಲ್ಲಿರುವ ಕಟೋಲ್-ಕಲ್ಮೇಶ್ವರ ರಸ್ತೆಯ ಸೋನ್‌ಖಾಂಬ್ ಗ್ರಾಮದ ಬಳಿ ಕಾರು ಹಾಗೂ ಸೋಯಾಬೀನ್​ ಸಾಗಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನುಳಿದವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net