ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಆರು ಮಂದಿ ಸಾವು; ಹೊಸವರ್ಷದ ಸಂಭ್ರದಲ್ಲಿದ್ದವರು ಸೇರಿದ್ದು ನೇರ ಮಸಣಕ್ಕೆ

Car Accident
Published on

ರಾಂಚಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್​ನ ಜಮ್‌ಶೆಡ್‌ಪುರದಲ್ಲಿ ನಡೆದಿದೆ.

ಘಟನೆಯು ಮುಂಜಾನೆ ಐದು ಘಂಟೆ ಸುಮಾರಿಗೆ ಬಿಸ್ತುಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕ್ಯೂಟ್ ಹೌಸ್ ಸ್ಕ್ವೇರ್ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಆದಿತ್ಯಪುರದ ಬಾಬಾ ಕುಟಿ ಪ್ರದೇಶದವರಾಗಿದ್ದಾರೆ. ಬಿಸ್ತುಪುರದಿಂದ ಮರೈನ್ ಡ್ರೈವ್ ಕಡೆಗೆ ಕಾರಿನಲ್ಲಿ ಪಿಕ್​ನಿಕ್​ಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೌಶಲ್ ಕಿಶೋರ್, ಫೈವ್ ಸೀಟರ್​ ಕಾರಿನಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮೊದಲಿಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಆ ಬಳಿಕ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಪೈಕಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಸಲಾಗುತ್ತಿದೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೌಶಲ್ ಕಿಶೋರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net