

ಬೆಂಗಳೂರು: ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಬಜೆಟ್ ೋಷಣೆ ಪ್ರಕಾರ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂಬ ವರದಿಯನ್ನು ಸಾರ್ವಜನಿಕರ ಮುಂದೆ ಮಂಡಿಸಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲೆಸೆದರು.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಗ್ಯಾರಂಟಿಗಳು ಪ್ರಚಾರಕ್ಕೆ ಸೀಮಿತವಾಗಿವೆ, ವಾಸ್ತವವಾಗಿ ಪೂರ್ಣ ಪ್ರಮಾಣದಲ್ಲಿ ಜನರಿಗೆ ತಲುಪಿಲ್ಲ. 10 ಕೆಜಿ ಎಂಬ ಭರವಸೆ ನೀಡಿದವರು ಕೇಂದ್ರ ಸರ್ಕಾರ ಕೊಡುತ್ತಿರುವ ಅಕ್ಕಿಯಲ್ಲಿ ಎರಡು ಕೆಜಿ ಕಡಿತ ಮಾಡಿದ್ದಾರೆ. ಅಕ್ಕಿ ಕಾಳಸಂತೆ ದಂಧೆಯಲ್ಲಿ ಸರ್ಕಾರ ಶಾಮೀಲಾಗಿರುವ ಸಂಶಯವಿದೆ ಎಂದರು.
ಸಾಲದ ಪ್ರಮಾಣ ಹೆಚ್ಚ ತೊಡಗಿದ್ದು, ಅಭಿವೃದ್ಧಿ ಕೆಲಸ ಸ್ಥಗಿತವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ, ಎಸ್‌ಟಿ ಅನುದಾನ ಬಳಸಿಕೊಂಡಿದ್ದಾರೆ. ಸಾಲದ ಸುಳಿಗೆ ಸಿಲುಕಿರುವ ರಾಜಸ್ಥಾನ, ಪಂಜಾಬ್ ಸೇರಿ ಮೂರು ರಾಜ್ಯಗಳಿಗೆ ಆರ್‌ಬಿಐ ಎಚ್ಚರಿಕೆ ನೀಡಿದೆ. ನಮ್ಮ ರಾಜ್ಯವನ್ನು ಆ ಪರಿಸ್ಥಿತಿಗೆ ತೆಗೆದುಕೊಂಡು ಹೋಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದರು.
ಮುಂಗಾರು ಮಳೆ ವೈಲ್ಯ, ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಮಾಡಿಕೊಂಡು ಕಷ್ಟದಲ್ಲಿರುವ ರೈತರಿಗೆ ಬರ ಪರಿಹಾರವಾಗಿ ಸಾವಿರ ರೂ. ವಿತರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿರುವುದು ನಾಚಿಕೆಗೇಡು, ಅವಮಾನಕರವೆಂದು ಬೊಮ್ಮಾಯಿ ವಾಗ್ದಾಳಿ ಮಾಡಿದರು.
ನಮ್ಮ ಆಡಳಿತಾವಧಿಯಲ್ಲಿ ಪ್ರವಾಹ, ಅತಿವೃಷ್ಟಿಯಿಂದಾದ ನಷ್ಟಕ್ಕೆ ತಕ್ಷಣ ಪರಿಹಾರ ವಿತರಿಸಿದ್ದೆವು. ನಂತರ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎ್ ನೆರವು ಪಡೆದುಕೊಂಡಿದ್ದೆವು. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಎಂದು ನೆನಪಿಸಿದರು.
ಎನ್‌ಡಿಆರ್‌ಎ್ನಲ್ಲಿ ಲಭ್ಯ ಅನುದಾನವನ್ನು ರಾಜ್ಯ ಸರ್ಕಾರ ಮೊದಲು ರೈತರಿಗೆ ವಿತರಿಸಿ, ಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸಬೇಕಿತ್ತು. ಈ ಜವಾಬ್ದಾರಿ ಮರೆತು ಅನಗತ್ಯವಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲವೆಂದು ಆಕ್ಷೇಪಿಸಿದರು.
ಕಿಸಾನ್ ಸಮ್ಮಾನ್ ಯೋಜನೆಯಡಿ ನಾಲ್ಕು ಸಾವಿರ ರೂ, ರೈತರಿಗೆ ಡೀಸೆಲ್ ಸಹಾಯಧನ, ರೈತರ ಮಕ್ಕಳಿಗೆ ವಿದ್ಯಾ ನಿಧಿ ನೀಡಿರುವುದನ್ನು ನಿಲ್ಲಿಸಲಾಗಿದೆ. ರೈತರು ಸಂಕಷ್ಟದಲ್ಲಿದ್ದಾಗ ಸರ್ಕಾರ ನೆರವಿಗೆ ಬರಬೇಕು. ಇಲ್ಲದಿದ್ದರೆ ಅದು ಜೀವಂತ ಸರ್ಕಾರ ಅನಿಸುವುದಿಲ್ಲ ಎಂದು ಬೊಮ್ಮಾಯಿ ತಿವಿದರು.
ವೈದ್ಯರ ಸಲಹೆ ಮೇರೆಗೆ ಬೆಳಗಾವಿ ಅಧಿವೇಶನದ ಮೊದಲ ವಾರ ಹಾಜರಾಗುತ್ತಿಲ್ಲ. ಎರಡನೇ ವಾರ ಹಾಜರಾಗುವೆ. ವಿಧಾನಸಭೆ ಪ್ರತಿಪಕ್ಷ ನಾಯಕ ಹುದ್ದೆ ಬೇಡವೆಂದು ನಾನೇ ಪಕ್ಷದ ವರಿಷ್ಠರಿಗೆ ವಿನಂತಿಸಿದ್ದೆ. ಈ ಸ್ಥಾನವನ್ನು ತುಂಬಿರುವ ಆರ್.ಅಶೋಕ್ ಸಮರ್ಥರಿದ್ದು, ಸದನದಲ್ಲಿ ಅದನ್ನು ಸಾಬೀತುಪಡಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ಸರ್ಕಾರದ ವಿರುದ್ಧ ಶೇಕಡ 40 ಕಮಿಷನ್ ಆರೋಪ ಮಾಡಿದವರು 50 ಪರ್ಸೆಂಟ್ ಕಮಿಷನ್ ಹೊಡೆಯುತ್ತಿದ್ದಾರೆ. ಕಮಿಷನ್ ಆರೋಪದ ತನಿಖೆ ನಡೆಸುತ್ತಿರುವ ಆಯೋಗಕ್ಕೆ ಗುತ್ತಿಗೆದಾರ ಡಿ.ಕೆಂಪಣ್ಣ ದಾಖಲೆ ಸಲ್ಲಿಸಿರುವುದಾಗಿ ಹೇಳಿದ್ದು, ಬಹಿರಂಗಪಡಿಸಲಿ ಎಂದು ಮಾಜಿ ಸಿಎಂ ಬೊಮ್ಮಾಯಿ ಸೆಡ್ಡು ಹೊಡೆದರು.