

ಗೋದಾವರಿ: ಮದುವೆ ಸಮಾರಂಭದಿಂದ ತೆರಳುತ್ತಿದ್ದ ಒಂದೇ ಕುಟುಂಬದ ಆರು ಜನ ಮಸಣಕ್ಕೆ ಸೇರಿದ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪಳ್ಳಿ ಹೊರವಲಯದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು, ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಕುಟುಂಬದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಾಜಾಜಿನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮಿಡ್ಡೆ ಸತಿ ಬಾಬು, ಮಿಡ್ಡೆ ತೇಜ, ಮಿಡ್ಡೆ ಸಾಯಿ, ಅರುಣ, ಶ್ರಾವಣಿ ಮತ್ತು ಎಂಟು ತಿಂಗಳು ಈ ಬೀಕರ ಅಪಘಾತದಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಮೃತರು ಹೈದರಾಬಾದ್‌ನಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜಮಹೇಂದ್ರವರಂನ ತಮ್ಮ ಹುಟ್ಟೂರಾದ ಪ್ರಕಾಶನಗರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಪಘಾತದ ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ರಾಜಮಹೇಂದ್ರವರಂ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.(ಏಜೆನ್ಸೀಸ್)