ಆರ್ಥಿಕ ಸದೃಢರಾಗಲು ಕೌಶಲ ಅಗತ್ಯ

28HHR1
Published on

ಹೊಳೆಹೊನ್ನೂರು: ಸಮಾಜದಲ್ಲಿ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಕೌಶಲ ತರಬೇತಿ ಅವಶ್ಯಕ ಎಂದು ತಾಲೂಕು ಯೋಜನಾಧಿಕಾರಿ ಅಜಯ್‌ಕುಮಾರ್ ಹೇಳಿದರು.

ಪಟ್ಟಣ ಸಮೀಪದ ಮಾರಶೆಟ್ಟಿಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕೇಂದ್ರದಿಂದ ಸಾರ್ವಜನಿಕ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಹೊಲಿಗೆ ತರಬೇತಿ ಸಮಾರೋಪದಲ್ಲಿ ಮಾತನಾಡಿದರು.
ಮಹಿಳೆಯರು ಸಮಯದ ಅವಕಾಶ ಇದ್ದಾಗ ಅಗತ್ಯ ಮಾಹಿತಿ ತಿಳಿದುಕೊಂಡು ತರಬೇತಿ ಪಡೆಯಬೇಕು. ಇದರಿಂದ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಗ್ರಾಮಾಭಿವೃದ್ಧಿ ಯೋಜನೆಯಡಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಸದ್ಬಳಕೆ ಪಡೆದು ಆದಾಯ ಗಳಿಸಿ ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು.
ಮಾರಶೆಟ್ಟಿಹಳ್ಳಿ ಗ್ರಾಪಂ ಅಧ್ಯಕ್ಷ ಕಿರಣ್ ಮೋರೆ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಕೆಲಸ ಮಾಡುತ್ತಿದ್ದು, ಇದರಿಂದ ಅನೇಕ ಕುಟುಂಬಗಳು ಆರ್ಥಿಕವಾಗಿ ಸಬಲಗೊಳ್ಳುತ್ತಿವೆ ಎಂದು ತಿಳಿಸಿದರು. ಒಕ್ಕೂಟದ ಅಧ್ಯಕ್ಷೆ ಅನಸೂಯಮ್ಮ, ಮಮತಾ ಮಂಜುನಾಥ್, ಆರತಿ, ಅಂಬಿಕಾ, ಶೋಭಾ, ರತ್ನಾ, ಸೇವಾ ಪ್ರತಿನಿಧಿ ಸುಜಾತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net