

ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ರೈತರ ಜೊತೆ ಮಾತನಾಡಲು ತೆರಳುತ್ತಿದ್ದಾಗ ಸಚಿವ ಶಿವಾನಂದ ಪಾಟೀಲ್(Shivanand Patil) ಕಾರಿನ ಮೇಲೆ ಗುರುವಾರ ಹೋರಾಟಗಾರರು ಚಪ್ಪಲಿ ಎಸೆಯುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಸಚಿವರು ಬಂದಿದ್ದರು. ಟನ್ ಕಬ್ಬಿಗೆ 3,500 ರೂ. ದರ ಘೋಷಣೆ ಮಾಡದೆ ಎರಡು ದಿನ ಸಮಯ ಕೇಳಿದಕ್ಕೆ ರೈತರು ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ.
ಕಾರಿಗೆ ಚಪ್ಪಲಿ, ನೀರಿನ ಬಾಟಲ್ ಎಸೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೆದ್ದಾರಿಯಲ್ಲಿ ಸಚಿವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರವಾದ ಹಿನ್ನೆಲೆ ವಿಧಾನಸೌಧದಲ್ಲಿ ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ರೈ ಮುಖಂಡರೊಂದಿಗೆ ನಾಳೆ(ನ.7) ಮಧ್ಯಾಹ್ನ 1ಕ್ಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.