ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ; ಪಂಚಭೂತಗಳಲ್ಲಿ ಲೀನರಾದ SM Krishna

SM krishna
Published on

ಮಂಡ್ಯ: ಮಾಜಿ ಮುಖ್ಯಮಂತ್ರಿ, ಮುತ್ಸದಿ ರಾಜಕಾರಣಿ ಎಸ್​. ಎಂ. ಕೃಷ್ಣ (SM Krishna) ಇಹಲೋಕ ತ್ಯಜಿಸಿದ್ದು, ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿದೆ.

ಸದಾಶಿವನಗರ ಮನೆಯಿಂದ ಪಾರ್ಥಿವ ಶರೀರವನ್ನು ಗಾಜಿನ ವಾಹನದಲ್ಲಿ ಮೆರವಣಿಗೆ ಮೂಲಕ ಹುಟ್ಟೂರಾದ ಸೋಮನಹಳ್ಳಿಗೆ ತೆಗೆದುಕೊಂಡು ಹೋಗಲಾಯಿತು. ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರು ಒಕ್ಕಲಿಗ ವಿಧಿ ವಿಧಾನಗಳ ಪ್ರಕಾರ ಅಂತಿಮ ಸಂಸ್ಕಾರದ ವಿಧಿ, ವಿಧಾನಗಳನ್ನು ನೆರವೇರಿಸಿದ್ದರು.

ಪತ್ನಿ ಪ್ರೇಮಾ ಕೃಷ್ಣ, ಪುತ್ರಿಯರು, ಮೊಮ್ಮಕ್ಕಳು ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿದ ಬಳಿಕ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದರು. ಮೊಮ್ಮಗ ಅಮರ್ತ್ಯ ಹೆಗ್ಡೆ ಅಗ್ನಿಸ್ಪರ್ಶ ಮಾಡಿದರು. ಒಕ್ಕಲಿಗ ಸಂಪ್ರದಾಯದಂತೆ ಎಸ್​.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿತು.

ಅಂತ್ಯಕ್ರಿಯೆಯಲ್ಲಿ ಮಠಾಧೀಶರು, ಸಿಎಂ, ಡಿಸಿಎಂ, ಶಾಸಕರು, ವಿಧಾನಪರಿಷತ್​ ಸದಸ್ಯರು, ಸಂಸದರು, ಮಾಜಿ ಶಾಸಕರು, ಸಿನಿಮಾ ಸೆಲೆಬ್ರಿಟಿಗಳು ಸೇರಿದಂತೆ ಖ್ಯಾತನಾಮರು ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net