

ಶಿವಮೊಗ್ಗ: ಸ್ಮಾರ್ಟ್‌ಸಿಟಿ ಯೋಜನೆ ಅತ್ಯಂತ ಕಳಪೆಯಾಗಿದ್ದು ಕಾಮಗಾರಿಗಳ ಲೋಪದೋಷಗಳನ್ನು ಆಲಿಸಲು ಮತ್ತ ದೂರು ಸ್ವೀಕರಿಸಲು ಸಾರ್ವಜನಿಕ ಸಭೆಯನ್ನು ಸೆ.12ರಂದು ಮಧ್ಯಾಹ್ನ 12.30ಕ್ಕೆ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತಕುಮಾರ್ ತಿಳಿಸಿದರು.
ಐದು ವರ್ಷದಲ್ಲಿ ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ ವಿವಿಧ ಪ್ಯಾಕೇಜ್‌ಗಳ ಅಡಿ 11 ಪೂರ್ಣ ಮತ್ತು 5 ಭಾಗಶಃ ವಾರ್ಡ್‌ಗಳಲ್ಲಿ ಕೈಗೆತ್ತಿಕೊಂಡಿರುವ ಎಲ್ಲ ಕಾಮಗಾರಿಗಳಲ್ಲೂ ಲೋಪದೋಷಗಳು ಕಂಡುಬಂದಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಅವಕಾಶ ನೀಡದೇ ಸ್ಮಾರ್ಟ್‌ಸಿಟಿ, ಪಾಲಿಕೆ ಮತ್ತು ಮೆಸ್ಕಾಂ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ಲೋಪದೋಷಗಳನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಿವೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಇಲ್ಲಿನ ಲೋಪಗಳನ್ನು ಪಟ್ಟಿ ಮಾಡಿ ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್, ನಗರ ನೀರು ಸರಬರಾಜು ಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಅವರಿಗೆ 60 ದೂರು ನೀಡಲಾಗಿದೆ. ಆದರೆ ಇಲ್ಲಿವರೆಗೂ ಲೋಪಗಳನ್ನು ಸರಿಪಡಿಸುವ ಕೆಲಸ ಆಗಿಲ್ಲ ಎಂದು ದೂರಿದರು.
ಪ್ರಮುಖರಾದ ಎಚ್.ಪಿ.ಸೀತರಾಮ, ಕೆ.ಎಂ.ಮಲ್ಲಪ್ಪ, ಕೆ.ಜೆ.ಮಿತ್ರ, ರಂಗಪ್ಪ, ಆರ್.ವಿನೋದ್ ಪೈ, ಎಸ್.ರಾಜು, ಎಸ್.ಪಿ.ಅಶೋಕ್‌ಕುಮಾರ್, ಚನ್ನವೀರಪ್ಪ ಗಾಮನಗಟ್ಟಿ ಇದ್ದರು.