ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ; ಬೆಚ್ಚಿಬಿದ್ದ ವೈದ್ಯರು

viralNews
Published on

ತೆಲಂಗಾಣ: ಕಚ್ಚಿದ ಹಾವನ್ನು ಹೊಡೆದು ಕೊಂದು ಮಹಿಳೆ ತನ್ನ ಜೆತೆಗೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾಳೆ.  ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ.

ನಡೆದಿದ್ದೇನು?:  ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ  ಕೂಲಿ ಕೆಲಸಕ್ಕೆ ಹೋಗಿದ್ದರು. ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಹಿಳೆಗೆ ಹಾವು ಕಚ್ಚಿದೆ. ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ.  ವೆಂಕಟಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ.

ಆಸ್ಪತ್ರೆಗೆ ಹೋದರೆ ಯಾವ ಹಾವು ಕಚ್ಚಿದೆ ಎಂದು ವೈದ್ಯರು ಕೇಳಿದರೆ ಏನು ಮಾಡಲಿ ಎಂದು ತಿಳಿಯದೇ ಮಹಿಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಹೋಗಿದ್ದಾಳೆ.ತಬ್ಬಿಬ್ಬಾದ ವೈದ್ಯಕೀಯ ಸಿಬ್ಬಂದಿ ಮಹಿಳೆಯ ಕೈಯಲ್ಲಿ ಸತ್ತ ಹಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ.ಮಹಿಳೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net