ಮಧ್ಯಾಹ್ನದ ಊಟದಲ್ಲಿ ಹಾವು! ಶಾಲೆಯಲ್ಲಿ ಊಟ ಮಾಡಿ ಅಸ್ವಸ್ಥರಾದ ಮಕ್ಕಳು...

west bengal
Published on

ಕೋಲ್ಕತ್ತಾ: ಬಂಗಾಳದ ಬಿರ್ಭುಮ್ ಜಿಲ್ಲೆಯ ಶಾಲೆಯೊಂದರಲ್ಲಿ ಬಿಸಿಯೂಟದ ಅಡುಗೆಯಲ್ಲಿ ಹಾವು ಕಂಡುಬಂದಿದೆ ಎಂದು ಹೇಳಲಾದ ಆಹಾರವನ್ನು ಹಲವಾರು ಶಾಲಾ ಮಕ್ಕಳು ಸೇವಿಸಿದ್ದಾರೆ. ಈ ಮಕ್ಕಳನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿರ್ಭುಮ್​ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಮಧ್ಯಾಹ್ನದ ಊಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ. ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. "ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಬೇಕಾಯಿತು" ಎಂದು ಅವರು ಸಿಬ್ಬಂದಿ ಹೇಳಿದ

ರು.

ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಗ್ರಾಮಸ್ಥರಿಂದ ದೂರುಗಳು ಬಂದಿವೆ. ಜನವರಿ 10ರಂದು ಭೇಟಿ ನೀಡಲಿರುವ ಜಿಲ್ಲಾ ನಿರೀಕ್ಷಕರಿಗೆ ಮಾಹಿತಿ ನೀಡಿದ್ದೇನೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಮಾಹಿತಿ ನೀಡಿದರು.

ಒಬ್ಬರನ್ನು ಹೊರತುಪಡಿಸಿ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಪಾಲಕರು ಶಾಲೆಯ ಮುಖ್ಯೋಪಾಧ್ಯಾಯರನ್ನು ಘೇರಾವ್ ಮಾಡಿ ಅವರ ದ್ವಿಚಕ್ರ ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net