

ಶಿಗ್ಗಾಂವಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ನಡೆಯುತ್ತಿದ್ದು, ಶನಿವಾರ ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕ್ಷೇತ್ರವಾದ ಶಿಗ್ಗಾಂವಿ ಬಿಜೆಪಿ ಕಚೇರಿ ಆವರಣದಲ್ಲಿ ಹಾವೊಂದು ಪ್ರತ್ಯಕ್ಷವಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದ ವೇಳೆಯೆ ಈ ಹಾವು ಕಾಣಿಸಿಕೊಂಡಿದ್ದು, ಇದರಿಂದಾಗಿ ಕೆಲಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಅಲರ್ಟ್ ಆದ ರಕ್ಷಣಾ ಸಿಬ್ಬಂದಿಗಳು ಹಾವನ್ನು ಹಿಡಿದು ದೂರದ ಸ್ಥಳಕ್ಕೆ ಹೋಗಿ ಬಿಟ್ಟು ಬಂದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ಖಾನ್ ಪಠಾಣ್ ಮತ್ತು ಬಸವರಾಜ ಬೊಮ್ಮಾಯಿ ನಡುವೆ ತೀವ್ರ ಪೈಪೋಟಿ ನಡೆದಿದ್ದು, ಸತತ ನಾಲ್ಕನೇ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಸಿಎಂ ಬೊಮ್ಮಾಯಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
ಕೆಲವೇ ಗಂಟೆಗಳಲ್ಲಿ ರಾಜ್ಯ ಚುನಾವಣೆಯ ಅಂತಿಮ ಫಲಿತಾಂಶ ಹೊರಬೀಳಲಿದ್ದು, 2024ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯು ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.(ಏಜೆನ್ಸೀಸ್)