ಅಂಗವಿಕಲರನ್ನು ಸ್ವಾವಲಂಬಿಗಳನ್ನಾಗಿ ಮಾಡಿ; ರುದ್ರಪ್ಪ ಲಮಾಣಿ

14-RNR-05
Published on

ರಾಣೆಬೆನ್ನೂರ: ಅಂಗವಿಕಲರಿಗೆ ಅನುಕಂಪ ತೋರುವ ಬದಲಾಗಿ ಅವಕಾಶ ನೀಡಿ ಸಾಮಾನ್ಯಂತೆ ಸ್ವಾವಲಂಬಿಗಳಾಗಿ ಬಾಳುವಂತೆ ಮಾಡಬೇಕು ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಇಲ್ಲಿನ ಶ್ರೀರಾಮ ನಗರದ ಸ್ನೇಹದೀಪ ಅಂಧ ಅಂಗವಿಕಲರ ಸಂಸ್ಥೆಯಲ್ಲಿ ಭಾನುವಾರ ಏರ್ಪಡಿಸಿದ್ದ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಧ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಸAಸ್ಥೆಯ ಪ್ರಭಾಕರ ಮುದಗಲ್ಲ ಅಧ್ಯಕ್ಷತೆ ವಹಿಸಿದ್ದರು. ೬೦ಕ್ಕೂ ಅಽಕ ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಸಂಸ್ಥೆಯ ಧರ್ಮದರ್ಶಿ ಕೆ.ಜಿ. ಮೋಹನ್, ಸಂಜೀವ ಶಿರಹಟ್ಟಿ, ಆರ್.ಆರ್. ಪಾಟೀಲ, ವಸಂತಾ ಹುಲ್ಲತ್ತಿ, ಪರಮೇಶಪ್ಪ ಮುದಿಗೌಡರ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net