ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ

IMG-20240206-WA0023
Published on

ಕಲ್ಕುಂದ: ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮ ಪಂಚಾಯಿತಿಯ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭೆಯು ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಅಧ್ಯಕ್ಷ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.

ಸಭೆಯಲ್ಲಿ 2022ರ ಏ.1ರಿಂದ 2023ರ ಮಾ.31ರವರೆಗಿನ 15ನೇ ಹಣಕಾಸು ಯೋಜನೆಯಲ್ಲಿ ನಡೆದ ಕಾಮಗಾರಿಗಳ ಖರ್ಚು ವೆಚ್ಚ ಗಳ ವರದಿ ಮಂಡಿಸಲಾಯಿತು.

ತಾಲೂಕು ಸಹಾಯಕ ಕೃಷಿ ಅಧಿಕಾರಿ ರವಿ ಅವರು ಇಲಾಖೆಯಲ್ಲಿ ದೊರೆಯುವ ಸವಲತ್ತುಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಪಂಚಾಯಿತಿ ಕಾರ್ಯದರ್ಶಿ ಪುಟ್ಟರಾಜು ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು.

ಉಪಾಧ್ಯಕ್ಷೆ ವಸಂತಾ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ನಾಗರಾಜಮೂರ್ತಿ, ಲೆಕ್ಕ ಸಹಾಯಕ ಮಹೇಶ್, ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಬಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net