ಸೋಷಿಯಲ್​ ಮೀಡಿಯಾ ಬ್ಯಾನ್ ​; ನೇಪಾಳದಲ್ಲಿ ಭಾರೀ ಪ್ರತಿಭಟನೆ: 19 ಕ್ಕೇರಿದ ಸಾವಿನ ಸಂಖ್ಯೆ! | Social Media Ban

Untitled design - 2025-09-08T192930.336
Published on

Social Media Ban: ಸಾಮಾಜಿಕ ಜಾಲತಾಣದ ಮೇಲೆ ನಿಷೇಧ ಹೇರಿದ ನೇಪಾಳ ಸರ್ಕಾರದ ವಿರುದ್ಧ ಬೀದಿಗಿಳಿದಿರುವ ಸಾವಿರಾರು ಯುವಜನತೆ, ಇಂದು ಬೃಹತ್​ ಪ್ರತಿಭಟನೆ ನಡೆಸಿದರು. ಸರ್ಕಾರದ ಬ್ಯಾನ್ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುತ್ತಿರುವ ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದಿದೆ. ಘಟನೆಯಲ್ಲಿ ಒಟ್ಟು 19 ಮಂದಿ ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನಾಕಾರರ ಮೇಲೆ ಪೊಲೀಸರು, ಜಲಫಿರಂಗಿ, ಅಶ್ರುವಾಯು, ರಬ್ಬಲ್ ಗುಂಡುಗಳನ್ನು ಹಾರಿಸಿದ್ದಾರೆ. ಇದೇ ವೇಳೆ ಅನೇಕ ಹೋರಾಟಗಾರರು ಸಂಸತ್​ ಆವರಣಕ್ಕೆ ನುಗ್ಗಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕಠ್ಮಂಡು ಜಿಲ್ಲಾಡಳಿತ ಕರ್ಪ್ಯೂ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ.

ಅಲ್ಲದೆ, ಸಾರ್ವಜನಿಕರ ಚಲನೆ, ಸಭೆ ಸೇರುವುದು, ಪ್ರತಿಭಟನೆಗಳು ಅಥವಾ ಸುತ್ತುವರಿದ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಕೆಲವು ಪ್ರತಿಭಟನಾಕಾರರು ಸಂಸತ್ತಿನ ಆವರಣವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು, ಇದು ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಿದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net