

ದಸರಾ ಹಬ್ಬ ಸಾಮರಸ್ಯ ಬೆಸೆದು, ಸಮುದಾಯಗಳ ಸಮ್ಮಿಲನದ ಸಾಮಾಜಿಕ ಸಂದೇಶವನ್ನು ದೇಶಕ್ಕೆ ರವಾನಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ನಾಡಹಬ್ಬವನ್ನು ಯಶಸ್ವಿಗೊಳಿಸಿದ್ದಾರೆ. ಈ ಬಾರಿ ಜಂಬೂಸವಾರಿಯನ್ನು ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದಾರೆ. ಪ್ರವಾಸೋದ್ಯಮ ಹಾಗೂ ವ್ಯಾಪಾರ, ವಹಿವಾಟಿಗೂ ದಸರೆ ಲಾಭ ತಂದುಕೊಟ್ಟಿದೆ.