ವೈದ್ಯರ ಸಂಘದಿಂದ ಸಾಮಾಜಿಕ ಸೇವೆ

indian medical association samvada
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯಿಂದ ಏರ್ಪಡಿಸಿದ್ದ ಸಂವಾದದಲ್ಲಿ ಡಾ.ಎಂ.ಎಸ್.ಅರುಣ್ ಕುಮಾರ್ ಮಾತನಾಡಿದರು. ಡಾ.ರಕ್ಷಾ ರಾವ್, ಕೆ.ಆರ್.ಸೋಮನಾಥ್, ವಿ.ಟಿ.ಅರುಣ್ ಉಪಸ್ಥಿತರಿದ್ದರು.
Published on

ಶಿವಮೊಗ್ಗ: ಐಎಂಎ(ಭಾರತೀಯ ವೈದ್ಯಕೀಯ ಸಂಘ) ಜಿಲ್ಲಾ ಶಾಖೆ ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಕಾಲೇಜು ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಾ.ಎಂ.ಎಸ್.ಅರುಣ್ ಕುಮಾರ್ ತಿಳಿಸಿದರು.

ಬುಧವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯಿಂದ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ರಕ್ತದಾನ ಶಿಬಿರ, ಮಹಿಳಾ ಆರೋಗ್ಯ, ಮಧುಮೇಹ ಚಿಕಿತ್ಸೆ, ಸ್ತನ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಬದಲಾಗುತ್ತಿರುವ ವೈದ್ಯಕೀಯ ತಂತ್ರಜ್ಞಾನಗಳನ್ನು ವೈದ್ಯರಿಗೆ ಪರಿಚಯಿಸುವ ಜತೆಗೆ ಹಲವು ಕಾರ್ಯಾಗಾರಗಳನ್ನೂ ನಡೆಸಲಾಗಿದೆ. ವೈದ್ಯರ ಕುಟುಂಬದವರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಕಾರ್ಯದರ್ಶಿ ಡಾ. ರಕ್ಷಾ ರಾವ್ ಮಾತನಾಡಿ, ಶಾಲಾ ಕಾಲೇಜುಗಳಿಗೆ ನಮ್ಮ ಮಹಿಳಾ ವೈದ್ಯರ ತಂಡ ತೆರಳಿ ವಿದ್ಯಾರ್ಥಿನಿಯರಲ್ಲಿ ಅನೇಕ ವಿಚಾರಗಳ ಬಗ್ಗೆ ಅರಿವು ಮೂಡಿಸುತ್ತಿದೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು, ಮಾನಸಿಕ ಒತ್ತಡ ನಿರ್ವಹಣೆ ಮುಂತಾದ ವಿಚಾರಗಳನ್ನು ತಿಳಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್, ನಗರ ಕಾರ್ಯದರ್ಶಿ ಕೆ.ಆರ್. ಸೋಮನಾಥ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net