

ಕಡೂರು: ವ್ಯಕ್ತಿ ಮತ್ತು ದೇಶದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಅನನ್ಯವಾದುದು. ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿರುವುದು ಶಿಕ್ಷಕರಿಗೆ ಮಾತ್ರ ಎಂದು ಬಿಇಒ ಆರ್.ಸಿದ್ದರಾಜುನಾಯ್ಕ ಹೇಳಿದರು.
ಶಿಕ್ಷಕರ ದಿನಾಚರಣೆ ಅಂಗವಾಗಿ ಮಂಗಳವಾರ ಪಟ್ಟಣದ ರೋಟರಿ ಕ್ಲಬ್‌ನಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಕರಾಗಿ ಸೇವೆ ಸಲ್ಲಿಸಿದವರಿಗೆ ನೇಷನ್ ಬಿಲ್ಡರ್ ಅವಾರ್ಡ್ ಹಾಗೂ 2023ರ ಸಾಲಿನಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಶ್ರೇಷ್ಠ ದಾರ್ಶನಿಕ. ಅವರ ಚಿಂತನೆಗಳು ಸಾರ್ಥಕ ಬದುಕು ನಡೆಸಲು ಸದಾ ಮಾರ್ಗದರ್ಶಿ. ಶ್ರೇಷ್ಠ ಸಂಸ್ಕೃತಿಯನ್ನು ಹೊಂದಿರುವ ಭಾರತ ದೇಶದ ಹಲವು ಮಹನೀಯರ ಕೊಡುಗೆಗಳಿಂದ ನಾವು ವಿಜ್ಞಾನ, ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ್ದೇವೆ ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಕೆ.ಪಿ.ರಾಘವೇಂದ್ರ ಮಾತನಾಡಿ, ಇಂದು ಮೌಲ್ಯಾಧಾರಿತ, ಗುಣಮಟ್ಟದ ಶಿಕ್ಷಣ ಅಗತ್ಯವಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಪ್ರಮುಖವಾದುದು. ಶಿಲೆಯನ್ನು ಕೆತ್ತಿ ಸುಂದರ ಮೂರ್ತಿಯಾಗಿಸುವ ಶಿಲ್ಪಿಯಂತೆ ಮಕ್ಕಳಿಗೆ ಶಿಕ್ಷಣ ನೀಡಿ ಅವರನ್ನು ಉತ್ತಮ ಪ್ರಜೆಯಾಗಿಸುವುದು ಶಿಕ್ಷಕರ ಜವಾಬ್ದಾರಿ ಎಂದು ಹೇಳಿದರು.
ಮಾತನಾಡಿ, ರೋಟರಿ ಕ್ಲಬ್ ವತಿಯಿಂದ ಉತ್ತಮ ಶಿಕ್ಷಕರನ್ನು ಗುರುತಿಸುವ ಮೂಲಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಜೊತೆಯಲ್ಲಿ
ನೇಷನ್ ಬಿಲ್ಡರ್ ಅವಾರ್ಡ್‌ಗೆ ಭಾಜನರಾದ ಸುಧಾಮಣಿ, ಷಡಾಕ್ಷರಿ ಮತ್ತು ಯಶ್ವಂತ್ ಅವರನ್ನು ಸನ್ಮಾನಿಸಲಾಯಿತು.
ರೋಟರಿ ಕಾರ್ಯದರ್ಶಿ ಸವಿತಾ ಸತ್ಯನಾರಾಯಣ, ಹಿರಿಯ ಪದಾಧಿಕಾರಿಗಳಾದ ಶಿವುಕುಮಾರ್, ಕೃಷ್ಣಸ್ವಾಮಿ, ಕೆ.ಎಚ್.ಮಂಜುನಾಥ್, ಪ್ರೇಮ್‌ಕುಮಾರ್, ಗೋಪಿಕೃಷ್ಣ, ಸುಬ್ರಹ್ಮಣ್ಯ ಇತರರಿದ್ದರು.